Last Updated:
ಭಾರತ ತಂಡದ ಸ್ಪಿನ್ ದಾಳಿಗೆ ತತ್ತರಿಸಿದ ಪಾಕಿಸ್ತಾನ ತಂಡ ಕೇವಲ 127ರನ್ಗಳ ಸಾಧಾರಣ ಮೊತ್ತ ದಾಖಲಿಸಿದೆ. ಶಾಹಿಬ್ಜಾದಾ 40 ಶಾಹೀನ್ ಅಫ್ರಿದಿ 33 ರನ್ಗಳಿಸಿ ತಂಡದ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಏಷ್ಯಾಕಪ್ನ ಬಹುನಿರೀಕ್ಷಿತ ಪಂದ್ಯದಲ್ಲಿ ಪಾಕಿಸ್ತಾನ (India vs Pakistan) ನಿರಾಶದಾಯಕ ಪ್ರದರ್ಶನ ತೋರಿದೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ಸ್ಪಿನ್ ದಾಳಿಗೆ ತತ್ತರಿಸಿದ ಪಾಕಿಸ್ತಾನ ತಂಡ ಕೇವಲ 127ರನ್ಗಳ ಸಾಧಾರಣ ಮೊತ್ತ ದಾಖಲಿಸಿದೆ. ಶಾಹಿಬ್ಜಾದಾ 40 ಶಾಹೀನ್ ಅಫ್ರಿದಿ 33 ರನ್ಗಳಿಸಿ ತಂಡದ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಸೈಮ್ ಆಯುಬ್ ಖಾತೆ ತೆರೆಯದೇ ಪಾಂಡ್ಯ ಬೌಲಿಂಗ್ನಲ್ಲಿ ಗೋಲ್ಡನ್ ಡಕ್ ಆದರು.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ (ಆಡುವ XI): ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ಪ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ಪಾಕಿಸ್ತಾನ (ಪ್ಲೇಯಿಂಗ್ XI): ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಫಖರ್ ಜಮಾನ್, ಸಲ್ಮಾನ್ ಅಘಾ (ನಾಯಕ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಸುಫಿಯಾನ್ ಮುಖೀಮ್, ಅಬ್ರಾರ್ ಅಹ್ಮದ್
September 14, 2025 9:50 PM IST