2025 ರ ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಆರಂಭವಾಗಲಿದೆ ಮತ್ತು ಸೆಪ್ಟೆಂಬರ್ 28 ರವರೆಗೆ ನಡೆಯಲಿದೆ. ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಗುಂಪು ‘ಎ’ ನಲ್ಲಿ ಭಾರತ, ಪಾಕಿಸ್ತಾನ, ಯುಎಇ ಮತ್ತು ಓಮನ್ ಇವೆ. ಗುಂಪು ‘ಬಿ’ ನಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಗ್ ಕಾಂಗ್ ಮತ್ತು ಶ್ರೀಲಂಕಾ ಇವೆ. ಭಾರತ ತಂಡ ಹಾಲಿ ಚಾಂಪಿಯನ್ ಆಗಿ ಟೂರ್ನಿಗೆ ಪ್ರವೇಶಿಸುತ್ತಿದೆ.