Last Updated:
ಲೀಗ್ನಲ್ಲಿ ಅಜೇಯವಾಗಿ ಉಳಿದಿದ್ದ ಶ್ರೀಲಂಕಾ ಸೂಪರ್ 4 ನಲ್ಲಿ ಅದೇ ಪ್ರದರ್ಶನವನ್ನ ತೋರುವಲ್ಲಿ ವಿಫಲವಾಗಿ ಫೈನಲ್ ರೇಸ್ನಿಂದ ಹೊರಬಿದ್ದು, ಇಂದು ನಡೆಯುವ ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವ ಇರಾದೆಯಲ್ಲಿದೆ. ಭಾರತ ತಂಡ ತನ್ನ ಅಜೇಯ ಓಟವನ್ನ ಉಳಿಸಿಕೊಳ್ಳುವ ಉತ್ಸಾಹದಲ್ಲಿದೆ.
ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಏಷ್ಯಾ ಕಪ್ 2025ರ (Asia Cup) 18ನೇ ಪಂದ್ಯವು ಶುಕ್ರವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಶ್ರೀಲಂಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಲೀಗ್ನಲ್ಲಿ ಅಜೇಯವಾಗಿ ಉಳಿದಿದ್ದ ಶ್ರೀಲಂಕಾ ಸೂಪರ್ 4 ನಲ್ಲಿ ಅದೇ ಪ್ರದರ್ಶನವನ್ನ ತೋರುವಲ್ಲಿ ವಿಫಲವಾಗಿ ಫೈನಲ್ ರೇಸ್ನಿಂದ ಹೊರಬಿದ್ದು, ಇಂದು ನಡೆಯುವ ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವ ಇರಾದೆಯಲ್ಲಿದೆ. ಅತ್ತ ಭಾರತ ತಂಡ ಶ್ರೀಲಂಕಾ ಮಣಿಸಿ ಅಜೇಯವಾಗಿ ಟ್ರೋಫಿ ಗೆಲ್ಲುವ ಉತ್ಸಾಹದಲ್ಲಿ ಕಣಕ್ಕಿಳಿಯುತ್ತಿದೆ. ಶ್ರೀಲಂಕಾ ಸೂಪರ್ ಫೋರ್ ನಲ್ಲಿ ತಮ್ಮ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದರೆ, ಅತ್ತ ಭಾರತ ತಂಡ ಲೀಗ್ ಹಂತದಲ್ಲಿ ಹಾಗೂ ಸೂಪರ್ 4 ಹಂತದಲ್ಲಿ ಅಜೇಯವಾಗಿ ಉಳಿದುಕೊಂಡಿದೆ.
ಭಾರತ ಮತ್ತು ಶ್ರೀಲಂಕಾ ನಡುವೆ ಇದುವರೆಗೂ 31 ಟಿ20 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ.
ಶ್ರೀಲಂಕಾ ಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ (ನಾಯಕ), ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ಜನಿತ್ ಲಿಯಾನಗೆ, ಮಹೇಶ್ ತೀಕ್ಷಣ, ನುವಾನ್ ತುಷಾರ, ದುಷ್ಮಂತ ಚಮೀರ
ಭಾರತ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೀ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್
September 26, 2025 8:03 PM IST