ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಡುವ ಹನ್ನೊಂದರ ಬಳಗ ಭಾರೀ ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗ ಹೇಗಿರಲಿದೆ? ಎಂಬುದರ ಕುರಿತು ಮಾಹಿತಿ ಇಲ್ಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಸೇರಿಸಿಕೊಳ್ಳಲಾಗಿದೆ. ಆದರೆ ಅವರ ಬೆನ್ನು ನೋವು ಮತ್ತು ಕೆಲಸದ ಹೊರೆಯ ಬಗ್ಗೆ ನಿರಂತರ ಚರ್ಚೆ ನಡೆಯುತ್ತಿದೆ. ಏಷ್ಯಾ ಕಪ್ ಮುಗಿದು ಕೆಲವೇ ದಿನಗಳು ಕಳೆದಿವೆ. ಏಷ್ಯಾ ಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಬಹುತೇಕ ಎಲ್ಲಾ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದರು. ಇತಂಹ ಸಂದರ್ಭದಲ್ಲಿ ವೆಸ್ಟ್ ವಿಂಡೀಸ್ ವಿರುದ್ಧ ಬುಮ್ರಾ ಆಡುವ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪಂದ್ಯದಲ್ಲಿ ಬುಮ್ರಾ ಅವರು ಎಷ್ಟು ಓವರ್ ಬೌಲ್ ಮಾಡಬಹುದು ಎಂಬುದನ್ನು ನಿರ್ಧರಿಸುತ್ತೇವೆ. ಮುಂಚಿತವಾಗಿ ಏನನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಏಷ್ಯಾ ಕಪ್ ಟೂರ್ನಿಯಲ್ಲಿ ಬುಮ್ರಾ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಆಡಿದ್ದರು. ಈ ವೇಳೆ ಅವರು ಏಳು ವಿಕೆಟ್‌ಗಳನ್ನು ಪಡೆದಿದ್ದರು. ಪವರ್‌ಪ್ಲೇನಲ್ಲಿ ಅವರು ಮೂರು ಓವರ್‌ಗಳನ್ನು ಬೌಲಿಂಗ್ ಮಾಡುವ ಮೂಲಕ ತಮ್ಮ ಫಿಟ್‌ನೆಸ್ ಅನ್ನು ಸಾಬೀತುಪಡಿಸಿದರು. ಏಷ್ಯಾ ಕಪ್ ವೆಸ್ಟ್ ಇಂಡೀಸ್ ಟೆಸ್ಟ್‌ಗಳಿಗೆ ಬುಮ್ರಾಗೆ ಉತ್ತಮ ಅಭ್ಯಾಸವನ್ನು ಒದಗಿಸುತ್ತಿದೆ ಎಂದು ಸಹಾಯಕ ಕೋಚ್ ರಯಾನ್ ಡೋಸ್ಚೇಟ್ ತಿಳಿಸಿದ್ದಾರೆ.
ಉಭಯ ತಂಡಗಳು
ಭಾರತ: ಶುಭಮನ್ ಗಿಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಎನ್. ಜಗದೀಸನ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ವೆಸ್ಟ್ ಇಂಡೀಸ್: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವೆಲನ್ ಆಂಡರ್ಸನ್, ಅಲಿಕ್ ಅಥನಾಜೆ, ಜಾನ್ ಕ್ಯಾಂಪ್ಬೆಲ್, ಟೆಗ್ನಾರಾಯಣ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶಾಯ್ ಹೋಪ್, ಟೆವಿನ್ ಇಮ್ಲಾಚ್, ಜೆಡಿಯಾ ಬ್ಲೇಡ್ಸ್, ಜೋಹಾನ್ ಲಿನ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ ಮತ್ತು ಜೇಡನ್ ಸೀಲ್ಸ್.
October 01, 2025 10:21 PM IST