IND vs WI: ವೈಟ್​ವಾಶ್ ಗುರಿ, ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ | India vs West Indies India Wins Toss Chooses to Bat in Second Test | ಕ್ರೀಡೆ

IND vs WI: ವೈಟ್​ವಾಶ್ ಗುರಿ, ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ | India vs West Indies India Wins Toss Chooses to Bat in Second Test | ಕ್ರೀಡೆ

Last Updated:

ನರೇಂದ್ರ ಮೋದಿ (Narendra Modi) ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯದಲ್ಲೂ ಗೆದ್ದು, ಪ್ರವಾಸಿ ತಂಡವನ್ನು ವೈಟ್‌ವಾಶ್ ಮಾಡಲು ಟೀಮ್ ಇಂಡಿಯಾ ಪ್ರಯತ್ನಿಸುತ್ತಿದೆ, ಆದರೆ ವೆಸ್ಟ್ ಇಂಡೀಸ್ ಈ ಪಂದ್ಯವನ್ನು ಗೆದ್ದು ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಪ್ರಯತ್ನಿಸುತ್ತಿದೆ.

ಭಾರತ vc ವೆಸ್ಟ್ ಇಂಡೀಸ್ಭಾರತ vc ವೆಸ್ಟ್ ಇಂಡೀಸ್
ಭಾರತ vc ವೆಸ್ಟ್ ಇಂಡೀಸ್

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ (Test Series) ಎರಡನೇ ಮತ್ತು ಅಂತಿಮ ಪಂದ್ಯ ಇಂದು, ಶುಕ್ರವಾರ, ಅಕ್ಟೋಬರ್ 10 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತದ ನಾಯಕ ಶುಭ್​ಮನ್ ಗಿಲ್ (Shubhman Gill) ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತದ ಆಡುವ XI ನಲ್ಲಿ ಯಾವುದೇ ಬದಲಾವಣೆಗಳಿಲ್ಲ. ಟೀಮ್ ಇಂಡಿಯಾ ಇಬ್ಬರು ವೇಗದ ಬೌಲರ್‌ಗಳು, ಮೂವರು ಸ್ಪಿನ್ನರ್‌ಗಳು ಮತ್ತು ಒಬ್ಬ ಆಲ್‌ರೌಂಡರ್‌ನೊಂದಿಗೆ ಆಡಲಿದೆ. ವೆಸ್ಟ್ ಇಂಡೀಸ್ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ (Narendra Modi) ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯದಲ್ಲೂ ಗೆದ್ದು, ಪ್ರವಾಸಿ ತಂಡವನ್ನು ವೈಟ್‌ವಾಶ್ ಮಾಡಲು ಟೀಮ್ ಇಂಡಿಯಾ ಪ್ರಯತ್ನಿಸುತ್ತಿದೆ, ಆದರೆ ವೆಸ್ಟ್ ಇಂಡೀಸ್ ಈ ಪಂದ್ಯವನ್ನು ಗೆದ್ದು ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಪ್ರಯತ್ನಿಸುತ್ತಿದೆ.

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ಧ್ರುವ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ವೆಸ್ಟ್ ಇಂಡೀಸ್ ( ಪ್ಲೇಯಿಂಗ್ XI): ಜಾನ್ ಕ್ಯಾಂಪ್‌ಬೆಲ್, ಟಗೆನರೈನ್ ಚಂದ್ರಪಾಲ್, ಅಲಿಕ್ ಅಥಾನಾಸೆ, ಶೈ ಹೋಪ್, ರೋಸ್ಟನ್ ಚೇಸ್ (ನಾಯಕ), ಟೆವಿನ್ ಇಮ್ಲಾಚ್ (ವಿಕೆಟ್ ಕೀಪರ್), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಆಂಡರ್ಸನ್ ಫಿಲಿಪ್, ಜೇಡನ್ ಸೀಲ್ಸ್.