IND vs WI 2nd Test: ಅವಕಾಶ ಸಿಕ್ಕರೂ ಅಬ್ಬರಿಸದ ಟೀಮ್ ಇಂಡಿಯಾದ ಯಂಗ್ ಬ್ಯಾಟರ್; ಕನ್ನಡಿಗನಿಗೆ ಚಾನ್ಸ್ ಸಿಗುತ್ತಾ? / Will Devdutt Padikkal get chance to replace Sai Sudarshan in second Test against West Indies? | ಕ್ರೀಡೆ

IND vs WI 2nd Test: ಅವಕಾಶ ಸಿಕ್ಕರೂ ಅಬ್ಬರಿಸದ ಟೀಮ್ ಇಂಡಿಯಾದ ಯಂಗ್ ಬ್ಯಾಟರ್; ಕನ್ನಡಿಗನಿಗೆ ಚಾನ್ಸ್ ಸಿಗುತ್ತಾ? / Will Devdutt Padikkal get chance to replace Sai Sudarshan in second Test against West Indies? | ಕ್ರೀಡೆ

Last Updated:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯ ಅಕ್ಟೋಬರ್ 10 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಅವಕಾಶ ಸಿಕ್ಕರೂ ಅಬ್ಬರಿಸದ ಟೀಮ್ ಇಂಡಿಯಾದ ಯಂಗ್ ಬ್ಯಾಟರ್ ಬದಲಿಗೆ ಕನ್ನಡಿಗನಿಗೆ ಚಾನ್ಸ್ ಸಿಗುತ್ತಾ?

Team India Team India
Team India

ವೆಸ್ಟ್ ಇಂಡೀಸ್ (West Indies) ತಂಡ ಸದ್ಯ ಭಾರತ (India) ಪ್ರವಾಸದಲ್ಲಿದೆ. ಅಹಮಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಸೋಲಿಸಿತ್ತು. ಅಕ್ಟೋಬರ್ 10 ರಂದು ಉಭಯ ತಂಡಗಳ ನಡುವೆ ನವದೆಹಲಿ(New Delhi)ಯಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಒಬ್ಬ ಆಟಗಾರ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇದಲ್ಲದೆ, ಒಂದರ ನಂತರ ಒಂದರಂತೆ ಈ ಆಟಗಾರ ತಮ್ಮ ಕಳಪೆ ಪ್ರದರ್ಶನದಿಂದ ಸುದ್ದಿಗಳಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿ(Team India)ಯಾದ ಆಡುವ ಹನ್ನೊಂದರ ಬಳಗದಲ್ಲಿ ಈ ಆಟಗಾರನಿಗೆ ಅವಕಾಶ ಸಿಗುತ್ತಾ? ಎಂಬ ಚರ್ಚೆ ಶುರುವಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ನಾಯಕ ಶುಭಮನ್ ಗಿಲ್ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಿಂದ ಈ ಆಟಗಾರನನ್ನು ಕೈಬಿಟ್ಟರೆ ಆಶ್ಚರ್ಯವೇನಿಲ್ಲ. ಈ ಆಟಗಾರರ ಟೆಸ್ಟ್ ಆಡಲು ಅನರ್ಹ ಎಂದು ಕ್ರಿಕೆಟ್ ಪಂಡಿತರು ಚರ್ಚೆ ನಡೆಸುತ್ತಿದ್ದಾರೆ.

ಟೀಮ್ ಇಂಡಿಯಾ ಅಭಿಮಾನಿಗಳು ಮತ್ತು ಕ್ರಿಕೆಟ್ ಪಂಡಿತರು ಸಾಯಿ ಸುದರ್ಶನ್ ಅವರ ಫಾರ್ಮ್ ಅನ್ನು ಟೀಕಿಸುತ್ತಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸಾಯಿ ಸುದರ್ಶನ್ 19 ಎಸೆತಗಳಲ್ಲಿ 7 ರನ್‌ಗಳಿಗೆ ಔಟಾದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಸಾಯಿ ಸುದರ್ಶನ್ ಅವರ ಫಾರ್ಮ್ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

ಸಾಯಿ ಸುದರ್ಶನ್
ಇದನ್ನೂ ಓದಿ: WTC: ಕೇವಲ 196 ರನ್​ಗಳು, ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಟೀಮ್ ಇಂಡಿಯಾದ ‘ಪ್ರಿನ್ಸ್’

ಸಾಯಿ ಸುದರ್ಶನ್ ಅವರನ್ನು ಟೆಸ್ಟ್‌ನಲ್ಲಿ ನಂಬರ್ 3 ಬ್ಯಾಟರ್ ಆಗಿ ಆಡಿಸಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಸುದರ್ಶನ್ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಟೆಸ್ಟ್‌ನಲ್ಲಿ ಪಾದಾರ್ಪಣೆ ಮಾಡಿದ ನಂತರ, ಸಾಯಿ ಸುದರ್ಶನ್ 4 ಟೆಸ್ಟ್ ಪಂದ್ಯಗಳಲ್ಲಿ 7 ಬಾರಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದಿದ್ದಾರೆ. ಈ ಸಂದರ್ಭದಲ್ಲಿ ಕ್ರಮವಾಗಿ 0, 30, 61, 0, 38, 11 ಮತ್ತು 7 ರನ್‌ಗಳನ್ನು ಗಳಿಸಿದ್ದಾರೆ.

ಕನ್ನಡಿಗನಿಗೆ ಚಾನ್ಸ್ ಸಿಗುತ್ತಾ?

ವಿದೇಶ ಅಥವಾ ಭಾರತದಲ್ಲಿ ಸಾಯಿ ಸುದರ್ಶನ್ ಉತ್ತಮ ಪ್ರದರ್ಶನ ನೀಡುವಲ್ಲಿ ಎಡುವಿದ್ದಾರೆ. ಇಲ್ಲಿಯವರೆಗೆ, ಸಾಯಿ ಸುದರ್ಶನ್ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 7 ಇನ್ನಿಂಗ್ಸ್‌ಗಳಲ್ಲಿ ಕೇವಲ 147 ರನ್ ಗಳಿಸಿದ್ದಾರೆ. ಇದರಲ್ಲಿ ಕೇವಲ ಒಂದು ಅರ್ಧಶತಕವೂ ಸೇರಿದೆ. ಅವರ ಗರಿಷ್ಠ ಸ್ಕೋರ್ 61. ಭಾರತಕ್ಕೆ ಟೆಸ್ಟ್ ಕ್ರಿಕೆಟ್‌ನಲ್ಲಿ ಸೂಕ್ತ ನಂಬರ್ 3 ಬ್ಯಾಟರ್ ಸಿಕ್ಕಿಲ್ಲ. ಸಾಯಿ ಸುದರ್ಶನ್ ಅವರ ಪ್ರದರ್ಶನವನ್ನು ಪರಿಗಣಿಸಿ, ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಕೈಬಿಡಬಹುದು. ಸುದರ್ಶನ್ ಬದಲಿಗೆ ಕನ್ನಡಿಗ ದೇವದತ್ ಪಡಿಕ್ಕಲ್ ಅವರಿಗೆ ನಂ. 3 ಸ್ಥಾನದಲ್ಲಿ ಅವಕಾಶ ನೀಡಬಹುದು. ಇತ್ತೀಚೆಗೆ ದೇವದತ್ ಪಡಿಕ್ಕಲ್ ಅದ್ಭುತ ಫಾರ್ಮ್​ನಲ್ಲಿದ್ದಾರೆ.

ಮೊದಲ ಟೆಸ್ಟ್ ಗೆಲುವು

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯ ಅಕ್ಟೋಬರ್ 10 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಅಹಮದಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು. ಈ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಕೇವಲ ಎರಡೂವರೆ ದಿನಗಳಲ್ಲಿ ಸೋಲು ಕಂಡಿತ್ತು.

ಭಾರತವು ಪಂದ್ಯವನ್ನು ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆಲ್​ರೌಂಡರ್ ರವೀಂದ್ರ ಜಡೇಜಾ ಅವರ ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿತ್ತು. ರವೀಂದ್ರ ಜಡೇಜಾ ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 104 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.