ಹೆಡಿಂಗ್ಲೆಯ ಚೇಸಿಂಗ್ ಇತಿಹಾಸ
ಹೆಡಿಂಗ್ಲೆ ಕ್ರೀಡಾಂಗಣವು ಟೆಸ್ಟ್ ಕ್ರಿಕೆಟ್ನಲ್ಲಿ ದೊಡ್ಡ ಚೇಸಿಂಗ್ಗಳಿಗೆ ಹೆಸರಾಗಿದೆ. 1948ರಲ್ಲಿ ಆಸ್ಟ್ರೇಲಿಯಾ ತಂಡವು 404 ರನ್ಗಳ ಗುರಿಯನ್ನು 7 ವಿಕೆಟ್ಗಳಿಗೆ ಯಶಸ್ವಿಯಾಗಿ ಬೆನ್ನಟ್ಟಿತ್ತು, ಇದು ಈ ಕ್ರೀಡಾಂಗಣದ ಗರಿಷ್ಠ ಚೇಸಿಂಗ್ ದಾಖಲೆಯಾಗಿದೆ. ಆ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 496ರನ್ಗಳಿಸಿದರೆ, ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ 458 ರನ್ಗಳಿಸಿತ್ತು. ನಂತರ ಇಂಗ್ಲೆಂಡ್ 38 ರನ್ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ನಲ್ಲಿ 365 ರನ್ಗಳಿಸಿ ಡಿಕ್ಲೇರ್ ಘೋಷಿಸಿ ಆಸೀಸ್ಗೆ 404 ರನ್ಗಳ ಗುರಿ ನೀಡಿತ್ತು. ಈ ಮೊತ್ತವನ್ನ ಚೇಸ್ ಮಾಡಿದ ಕಾಂಗರೂ ಪಡೆ ಡೊನಾಲ್ಡ್ ಬ್ರಾಡ್ಮನ್ (ಅಜೇಯ 173) ಹಾಗೂ ಆರ್ಥರ್ ಮೋರಿಸ್(182) ಶತಕಗಳ ನೆರವಿನಿಂದ 6 ವಿಕೆಟ್ಗಳ ಜಯ ಸಾಧಿಸಿತ್ತು. ಇದು 77 ವರ್ಷಗಳಿಂದ ಈ ದಾಖಲೆ ಆಸ್ಟ್ರೇಲಿಯಾ ಹೆಸರಿನಲ್ಲಿಯೇ ಇದೆ.
ಲೀಡ್ಸ್ನಲ್ಲಿ ಗರಿಷ್ಠ ಚೇಸಿಂಗ್ ದಾಖಲೆ ಇಲ್ಲಿವೆ
ಆಸ್ಟ್ರೇಲಿಯಾ vs ಇಂಗ್ಲೆಂಡ್ (1948)- 404 ರನ್
ಇಂಗ್ಲೆಂಡ್ vs ಭಾರತ (2025)- 371 ರನ್
ಇಂಗ್ಲೆಂಡ್ vs ಆಸ್ಟ್ರೇಲಿಯಾ (2019)- 359 ರನ್
ವೆಸ್ಟ್ ಇಂಡೀಸ್ vs ಇಂಗ್ಲೆಂಡ್ (2017)- 322 ರನ್
ಇಂಗ್ಲೆಂಡ್ vs ಆಸ್ಟ್ರೇಲಿಯಾ (2001)- 315 ರನ್
ಇಂಗ್ಲೆಂಡ್ vs ನ್ಯೂಜಿಲೆಂಡ್ (2022)- 296 ರನ್
ಇಂಗ್ಲೆಂಡ್ vs ಆಸ್ಟ್ರೇಲಿಯಾ (2023)- 251 ರನ್
ಇಂಗ್ಲೆಂಡ್ vs ಪಾಕಿಸ್ತಾನ (1982)- 219 ರನ್
ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ (1929)- 184 ರನ್
ಪಾಕಿಸ್ತಾನ vs ಆಸ್ಟ್ರೇಲಿಯಾ (2010)- 180 ರನ್
ವೆಸ್ಟ್ ಇಂಡೀಸ್ vs ಇಂಗ್ಲೆಂಡ್ (1984)- 128 ರನ್
2019ರಲ್ಲಿ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿತ್ತು ಹೆಡಿಂಗ್ಲೆ
ಇತ್ತೀಚಿನ ಚೇಸ್ ಗಮನಿಸಿದರೆ 2019ರಲ್ಲಿ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ವಿರುದ್ಧ 359ರನ್ಗಳನ್ನ ಯಶಸ್ವಿಯಾಗಿ ಚೇಸ್ ಮಾಡಿ ಗೆದ್ದಿದ್ದಾಗಿದೆ. ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 179ಕ್ಕೆ ಆಲೌಟ್ ಆದರೆ, ಇಂಗ್ಲೆಂಡ್ 2ನೇ ಕೇವಲ 67ಕ್ಕೆ ಆಲೌಟ್ ಆಗಿತ್ತು. ನಂತರ 2ನೇ ಇನ್ನಿಂಗ್ಸ್ನಲ್ಲಿ 112 ರನ್ಗಳ ಮುನ್ನಡೆಯೊಂದಿಗೆ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 246 ರನ್ಗಳಿಸಿ ಅತಿಥೇಯ ತಂಡಕ್ಕೆ 359ರನ್ಗಳ ಟಾರ್ಗೆಟ್ ನೀಡಿತ್ತು. ಈ ಮೊತ್ತವನ್ನ ಬೆನ್ ಸ್ಟೋಕ್ಸ್ ಸಿಡಿಸಿದ ಐತಿಹಾಸಿಕ ಅಜೇಯ ಶತಕದ (135) ನೆರವಿನಿಂದ ಇಂಗ್ಲೆಂಡ್ 1 ವಿಕೆಟ್ ಜಯ ಸಾಧಿಸಿತ್ತು. ಇದು ಟೆಸ್ಟ್ ಕ್ರಿಕೆಟ್ ಚರಿತ್ರೆಯಲ್ಲಿ ಒಂದು ಐತಿಹಾಸಿಕ ಚೇಸಿಂಗ್ ಆಗಿ ಗುರುತಿಸಿಕೊಂಡಿದೆ.
ನ್ಯೂಸ್ 18 ಕನ್ನಡ ಕ್ರೀಡಾ ವಿಭಾಗದಲ್ಲಿ ಕ್ರಿಕೆಟ್ ಅಪ್ಡೇಟ್ಸ್, ಮ್ಯಾಚ್ ಅಪ್ಡೇಟ್ಸ್, ಮ್ಯಾಚ್ ರಿವೀವ್ಸ್, ಲೈವ್ ಸ್ಕೋರ್ಗಳು, ಪಂದ್ಯ ವಿಶ್ಲೇಷಣೆ, ಆಟಗಾರರ ಪ್ರೊಫೈಲ್ಗಳು ಮತ್ತು ಇತರ ಕ್ರೀಡೆಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಪಡೆಯಿರಿ. ಹೆಚ್ಚಿನ ಸುದ್ದಿಗಳಿಗಾಗಿ ನ್ಯೂಸ್ 18 ಕನ್ನಡ ಫಾಲೋ ಮಾಡಿ
June 25, 2025 9:52 AM IST