Last Updated:
ಲಾರ್ಡ್ಸ್ ಮೈದಾನದಲ್ಲಿ ಮೂರನೇ ಹಾಗೂ ಬಹುನಿರೀಕ್ಷಿತ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ. ಇಂದಿನಿಂದ (ಜುಲೈ 10) ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ಮೂರನೇ ಹಾಗೂ ಬಹುನಿರೀಕ್ಷಿತ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಇತ್ತ ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲುವಿನ ಹೊರತಾಗಿಯೂ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಿಕೊಂಡಿದೆ.
ಹೌದು, ಕಳೆದ ಎರಡು ಪಂದ್ಯಗಳಲ್ಲಿ ತಂಡದಲ್ಲಿದ್ದರೂ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ವಿಫಲವಾಗಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನು ಲಾರ್ಡ್ಸ್ ಟೆಸ್ಟ್‌ನಿಂದ ಹೊರಗಿಡಲಾಗಿದೆ. ಇತ್ತ ಟೀಂ ಇಂಡಿಯಾಗೆ ಸ್ಟಾರ್ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಪ್ಲೇಯಿಂಗ್ XI ಗೆ ಮರಳಿದ್ದಾರೆ. ಇಂಗ್ಲೆಂಡ್ ತಂಡಕ್ಕೆ ಬರೋಬ್ಬರಿ 4 ವರ್ಷದ ನಂತರ ವೇಗಿ ಜೋಫ್ರಾ ಆರ್ಚರ್ ಪ್ಲೇಯಿಂಗ್-XI ನಲ್ಲಿ ಅವಕಾಶ ಪಡೆದಿದ್ದಾರೆ.
ಲೀಡ್ಸ್‌ನ ಹಡಿಂಗ್ಲಿಯಲ್ಲಿ ನಡೆದ ಮೊದಲ ಪಂದ್ಯವನ್ನು ಗೆದ್ದ ಇಂಗ್ಲೆಂಡ್ ತಂಡಕ್ಕೆ ಎಡ್ಜ್‌ಬಾಸ್ಟನ್‌ನಲ್ಲಿ ಸೋಲಿನ ಶಾಕ್ ಎದುರಾಯಿತು. ಈ ಹಿನ್ನೆಲೆಯಲ್ಲಿ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಇತ್ತ ಟೀಂ ಇಂಡಿಯಯಾ ಎರಡನೇ ಪಂದ್ಯದ ಗೆಲುವಿನ ಹೊರತಾಗಿಯು ಕಳಪೆ ಪ್ರದರ್ಶನ ತೋರುತ್ತಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಕೋಕ್ ನೀಡಿದ್ದು, ಜಸ್ಪ್ರಿತ್ ಬುಮ್ರಾ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ (ಆಟಗಾರ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇಂಗ್ಲೆಂಡ್ (ಆಟಗಾರ XI): ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಶೋಯೆಬ್ ಬಶೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
July 10, 2025 3:07 PM IST