India vs England: ಸಚಿನ್–ಆಂಡರ್ಸನ್ (Sachin-Anderson) ಟ್ರೋಫಿಯ 5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ಮುಕ್ತಾಯಗೊಂಡಿದ್ದು, ಇದರಲ್ಲಿ ಆತಿಥೇಯ ಇಂಗ್ಲೆಂಡ್ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ನಾಲ್ಕನೇ ಟೆಸ್ಟ್ ಜುಲೈ 23ರಿಂದ ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ನಡೆಯಲಿದೆ. ಈ ಪಂದ್ಯಕ್ಕೆ ಆಡುವ 11ರ ಬಳಗವನ್ನು ಇಂಗ್ಲೆಂಡ್ ಈಗಾಗಲೇ ಘೋಷಣೆ ಮಾಡಿದೆ.
ಹೌದು, 4ನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ರಕಟಿಸಿರುವ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮೂರನೇ ಟೆಸ್ಟ್ ಪಂದ್ಯದ ಸಮಯದಲ್ಲಿ ಶೋಯೆಬ್ ಬಶೀರ್ ಬೆರಳಿನ ಗಾಯದಿಂದ ತಂಡದಿಂದ ಹೊರಗುಳಿದಿರುವುದರಿಂದ ಅವರ ಬದಲಿ ಆಟಗಾರನನ್ನು ಆಯ್ಕೆ ಮಾಡಲಾಗಿದೆ. ಹೌದು, ಬಶೀರ್ ಬದಲಿಗೆ ಇಂಗ್ಲೆಂಡ್ ತಂಡದಲ್ಲಿ ಲಿಯಾಮ್ ಡಾಸನ್ ಪ್ಲೇಯಿಂಗ್11 ನಲ್ಲಿ ಬಂದಿದ್ದಾರೆ. ಇವರು ಜುಲೈ 2017 ರ ನಂತರ ಇಂಗ್ಲೆಂಡ್ ತಂಡದ ಪರವಾಗಿ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.
ಡಾಸನ್ ಇಂಗ್ಲೆಂಡ್ ತಂಡದ ಪರವಾಗಿ ಇಲ್ಲಿಯವರೆಗೆ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಡಿಸೆಂಬರ್ 2016 ರಲ್ಲಿ ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಮಾತ್ರವಲ್ಲ, ಅವರು 2019 ರ ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಆದರೆ ಅಲ್ಲಿ ಅವರಿಗೆ ಆಡುವ XIರಲ್ಲಿ ಅವಕಾಶ ಸಿಕ್ಕಿರಲಿಲ್ಲ. 3 ಟೆಸ್ಟ್‌ಗಳನ್ನು ಹೊರತುಪಡಿಸಿ, ಡಾಸನ್ 6 ODI ಮತ್ತು 14 T20I ಗಳನ್ನು ಸಹ ಆಡಿದ್ದಾರೆ.
ಬೆನ್ ಡಕೆಟ್ ಜೊತೆ ಜ್ಯಾಕ್ ಕ್ರಾಲೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಓಲ್ಲಿ ಪೋಪ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಮತ್ತು ಜೋ ರೂಟ್ ನಂತರ ಬ್ಯಾಟಿಂಗ್ ಮಾಡಲಿದ್ದಾರೆ. ಹ್ಯಾರಿ ಬ್ರೂಕ್ 5ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಅವರ ನಂತರ ಸ್ಟೋಕ್ಸ್, ಜೇಮೀ ಸ್ಮಿತ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ ಮತ್ತು ಜೋಫ್ರಾ ಆರ್ಚರ್ ಆಡಲಿದ್ದಾರೆ. ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಆರ್ಚರ್ ಆಡುವ XI ಗೆ ಮರಳಿದರು.
ಈ ನಡುವೆ ಟೀಂ ಇಂಡಿಯಾ ಆಡುವ XI ರಲ್ಲಿ ಕನಿಷ್ಠ ಎರಡು ಬದಲಾವಣೆಗಳನ್ನು ಕಾಣಬಹುದು. ಏಕೆಂದರೆ ನಿತೀಶ್ ಕುಮಾರ್ ರೆಡ್ಡಿ ಮತ್ತು ಆಕಾಶ್ ದೀಪ್ ಗಾಯದ ಕಾರಣದಿಂದಾಗಿ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ನಿತೀಶ್ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದು, ಮನೆಗೆ ಮರಳಲಿದ್ದಾರೆ. ಆಕಾಶ್ ಬೆನ್ನು ನೋವಿನಿಂದ ಬಳಲುತ್ತಿದ್ದು, ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡುವುದಿಲ್ಲ ಎಂದು ವರದಿಯಾಗಿದೆ. ಇತ್ತೀಚೆಗೆ ತಂಡಕ್ಕೆ ಸೇರ್ಪಡೆಗೊಂಡಿರುವ ಅನ್ಶುಲ್ ಕಾಂಬೋಜ್ ಮ್ಯಾಂಚೆಸ್ಟರ್‌ನಲ್ಲಿ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಅಂತಿಮ XI ನಲ್ಲಿ ನಿತೀಶ್ ಬದಲಿಗೆ ಶಾರ್ದೂಲ್ ಠಾಕೂರ್ ಸ್ಥಾನ ಪಡೆಯಬಹುದು.
ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ XI: ಬೆನ್ ಸ್ಟೋಕ್ಸ್ (ನಾಯಕ), ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಜೇಮೀ ಸ್ಮಿತ್, ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್ ಸ್ಥಾನ ಪಡೆದಿದ್ದಾರೆ.
July 22, 2025 7:01 PM IST
India vs England: 2019ರ ವಿಶ್ವಕಪ್ ವಿಜೇತ ಆಟಗಾರನಿಗೆ ಚಾನ್ಸ್! ಭಾರತ ವಿರುದ್ಧ 4ನೇ ಟೆಸ್ಟ್‌ಗೆ ಬಲಿಷ್ಠ ಪ್ಲೇಯಿಂಗ್ XI ಪ್ರಕಟಿಸಿದ ಇಂಗ್ಲೆಂಡ್