Last Updated:
ಟೀಂ ಇಂಡಿಯಾ ಬೌಲಿಂಗ್‌ಗೆ ಬೆಚ್ಚಿ ಬಿದ್ದ ಇಂಗ್ಲೆ.ಡ್ ಟೀಂ ಇಂಡಿಯಾಗೆ ಸುಲಭ ಗುರಿ ನೀಡಿತ್ತು. ಈ ಸುಲಭ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಬೌಂಡರಿ ಸಿಕ್ಸರ್ ಸಹಿತ ಅಬ್ಬರಿಸಿ ಬೊಬ್ಬಿರಿದರು.
ಭಾರತ ಮತ್ತು ಇಂಗ್ಲೆಂಡ್ (India Under-19 vs England Under-19) ಅಂಡರ್-19 ತಂಡಗಳ ನಡುವೆ ಏಕದಿನ (ODI) ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಟೀಂ ಇಂಡಿಯಾಗೆ (Team India) ಕೇವಲ 175 ರನ್‌ಗಳ ಸಾಧಾರಣ ಗುರಿ ನೀಡಿದೆ. ಈ ಸುಲಭ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Suryavamshi) ಬೌಂಡರಿ ಸಿಕ್ಸರ್ ಸಹಿತ ಅಬ್ಬರಿಸಿ ಬೊಬ್ಬಿರಿದರು.
ಇಂಗ್ಲೆಂಡ್ ನೀಡಿದ್ದ 175 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಸ್ಟಾರ್ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ ಹಾಗೂ ನಾಯಕ ಆಯುಷ್ ಮ್ಹಾತ್ರೆ 71 ರನ್‌ಗಳ ಸ್ಫೋಟಕ ಆರಂಭ ಒದಗಿಸಿದರು. ಅದರಲ್ಲೂ ವೈಭವ್ ಸೂರ್ಯವಂಶಿ ಕೇವಲ 19 ಎಸೆತಗಳಲ್ಲಿ 252ರ ಸ್ಟ್ರೈಕ್‌ರೇಟ್‌ನಲ್ಲಿ 48 ರನ್ ಸಿಡಿಸಿ ಮಿಂಚಿದರು.
ಹೌದು, ಸೂರ್ಯವಂಶಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ ರಾಯಲ್ ಪರ ಆರಂಭಿಕರಾಗಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಹಲವು ದಾಖಲೆ ಬರೆದಿದ್ದರು. ಅದರಲ್ಲೂ ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ-20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತೀ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
ಅದಾದ ಬಳಿಕ ಬೆಂಗಳೂರಿನ ಎನ್‌ಸಿಎನಲ್ಲಿ ಭರ್ಜರಿ ಅಭ್ಯಾಸ ಪಡೆದು ಅಲ್ಲಿಂದ ನೇರವಾಗಿ ಇಂಗ್ಲೆಂಡ್-19 ವಿರುದ್ಧದ ಸರಣಿಗೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದರು. ಸದ್ಯ ವೈಭವ್ ಅವರು ತಮ್ಮ ಐಪಿಎಲ್ ಪ್ರದರ್ಶನವನ್ನೇ ಮುಂದುವರೆಸಿದ್ದು 2 ರನ್‌ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು ಕೂಡ ಪ್ರಾಮಿಸಿಂಗ್ ಇನ್ನಿಂಗ್ಸ್ ಮೂಲಕ ಆಂಗ್ಲ ಬೌಲರ್‌ಗಳ ಬೆಂಡೆತ್ತಿದರು. ಅವರು ತಮ್ಮ ಇನ್ನಿಂಗ್ಸ್ನಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿ ಸಿಡಿಸಿ ಮಿಂಚಿದರು.
ವೈಭವ್ ಸೂರ್ಯವಂಶಿ ಬೌಲಿಂಗ್
ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪಾದಾರ್ಪಣೆ ಮಾಡಿದಂದಿನಿಂದ ವೈಭವ್ ಸೂರ್ಯವಂಶಿ ಹೆಸರು ಎಲ್ಲರ ಬಾಯಲ್ಲಿ ಕೇಳಿಬರುತ್ತಿದೆ. ಇದರೊಂದಿಗೆ ವೈಭವ್ ಐಪಿಎಲ್ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಐಪಿಎಲ್ 2025 ರಲ್ಲಿ ಶತಕ ಗಳಿಸುವ ಮೂಲಕ ವೈಭವ್ ಸೂರ್ಯವಂಶಿ ಇತಿಹಾಸ ನಿರ್ಮಿಸಿದರು. ಈ 14 ವರ್ಷದ ಆಟಗಾರ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದರು. ಅದೇ ಸಮಯದಲ್ಲಿ, ಈ ಯುವ ಆಟಗಾರ ಈಗ ಇಂಗ್ಲೆಂಡ್ ವಿರುದ್ಧ ಭಾರತದ ಅಂಡರ್ -19 ತಂಡದ ಭಾಗವಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ವೈಭವ್ ಬೌಲಿಂಗ್ ಮಾಡುತ್ತಿರುವುದು ಕೂಡ ಕಂಡುಬಂದಿದೆ.
ನ್ಯೂಸ್ 18 ಕನ್ನಡ ಕ್ರೀಡಾ ವಿಭಾಗದಲ್ಲಿ ಕ್ರಿಕೆಟ್ ಅಪ್ಡೇಟ್ಸ್, ಮ್ಯಾಚ್ ಅಪ್ಡೇಟ್ಸ್, ಮ್ಯಾಚ್ ರಿವೀವ್ಸ್, ಲೈವ್ ಸ್ಕೋರ್ಗಳು, ಪಂದ್ಯ ವಿಶ್ಲೇಷಣೆ, ಆಟಗಾರರ ಪ್ರೊಫೈಲ್ಗಳು ಮತ್ತು ಇತರ ಕ್ರೀಡೆಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಪಡೆಯಿರಿ. ಹೆಚ್ಚಿನ ಸುದ್ದಿಗಳಿಗಾಗಿ ನ್ಯೂಸ್ 18 ಕನ್ನಡ ಫಾಲೋ ಮಾಡಿ
June 27, 2025 8:06 PM IST