INDW vs AUSW: ಅದೇ ಸೆಮಿಸ್, ಅದೇ ಎದುರಾಳಿ; ಮತ್ತೊಂದು ಮ್ಯಾಜಿಕ್ ಇನ್ನಿಂಗ್ಸ್ ಆಡ್ತಾರಾ ಹರ್ಮನ್​ಪ್ರೀತ್ ಕೌರ್? / Team India fans are waiting to see another big innings of 171 runs from Harmanpreet Kaur against Australia | ಕ್ರೀಡೆ

INDW vs AUSW: ಅದೇ ಸೆಮಿಸ್, ಅದೇ ಎದುರಾಳಿ; ಮತ್ತೊಂದು ಮ್ಯಾಜಿಕ್ ಇನ್ನಿಂಗ್ಸ್ ಆಡ್ತಾರಾ ಹರ್ಮನ್​ಪ್ರೀತ್ ಕೌರ್? / Team India fans are waiting to see another big innings of 171 runs from Harmanpreet Kaur against Australia | ಕ್ರೀಡೆ

Last Updated:

ಐಸಿಸಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025ರ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಂದ ಮತ್ತೊಂದು ಮ್ಯಾಜಿಕ್ ಇನ್ನಿಂಗ್ಸ್ ನೋಡಲು ಟೀಮ್ ಇಂಡಿಯಾ ಅಭಿಮಾನಿಗಳು ಕಾಯುತ್ತಿದ್ದಾರೆ.

Harmanpreet Kaur
Harmanpreet Kaur

ಭಾರತ ಮತ್ತು ಆಸ್ಟ್ರೇಲಿಯಾ(India vs Australia) ನಡುವಿನ ಐಸಿಸಿ ಏಕದಿನ ಮಹಿಳಾ ವಿಶ್ವಕಪ್‌(World Cup) 2025 ರ ಸೆಮಿಫೈನಲ್(Semi-final) ಪಂದ್ಯವು ಅಕ್ಟೋಬರ್ 30 ರಂದು ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಈಗಾಗಲೇ ಆರಂಭವಾಗಿದೆ. ಹರ್ಮನ್‌ಪ್ರೀತ್ ಕೌರ್(Harmanpreet Kaur) ನೇತೃತ್ವದ ಟೀಮ್ ಇಂಡಿಯಾ ತವರಿನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ಮಹಿಳಾ ವಿಶ್ವಕಪ್‌ 2025 ರ ಫೈನಲ್ ತಲುಪುವ ನಿರೀಕ್ಷೆಯಲ್ಲಿದೆ. ಆದರೆ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ 7 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡದಿಂದ ಭಾರತ ಕಠಿಣ ಸವಾಲನ್ನು ಎದುರಿಸುತ್ತಿದೆ.

ಫಾರ್ಮ್‌ನಲ್ಲಿರುವ ಪ್ರತೀಕಾ ರಾವಲ್ ಗಾಯವು ಖಂಡಿತವಾಗಿಯೂ ಭಾರತ ತಂಡಕ್ಕೆ ದೊಡ್ಡ ತಲೆ ನೋವಾಗಿದೆ. ಆದರೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಮತ್ತೊಂದು ಮ್ಯಾಜಿಕ್ ಇನ್ನಿಂಗ್ಸ್ ನಿರೀಕ್ಷೆಯಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಎಂಟು ವರ್ಷಗಳ ಹಿಂದೆ ಆಸ್ಟ್ರೇಲಿಯಾ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಆಡಿದ್ದ ಅದ್ಭುತ ಇನ್ನಿಂಗ್ಸ್ ಮರುಕಳಿಸುತ್ತಾ? ಎಂದು ಇಡೀ ದೇಶ ಎದುರು ನೋಡುತ್ತಿದೆ.

ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹರ್ಮನ್‌ಪ್ರೀತ್ ಕೌರ್ ಅಬ್ಬರಿಸುವ ನಿರೀಕ್ಷೆಯಿದೆ. ಭಾರತ ಫೈನಲ್‌ಗೆ ತಲುಪಿ ಇತಿಹಾಸ ಸೃಷ್ಟಿಸಲು ಆಸ್ಟ್ರೇಲಿಯಾ ವಿರುದ್ಧ ವಿಶೇಷವಾದದ್ದನ್ನು ಮಾಡಬೇಕಾಗಿದೆ. ಆದರೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಪ್ರತಿಕಾ ರಾವಲ್ ಅವರ ಅಲಭ್ಯತೆ ತಂಡಕ್ಕೆ ಹಿನ್ನಡೆಯಾಗಿದೆ. ನ್ಯೂಜಿಲೆಂಡ್ ವಿರುದ್ಧ ರಾವಲ್ ಶತಕ ಬಾರಿಸುವ ಮೂಲಕ ಭಾರತ ತಂಡದ ಆಧಾರವಾಗಿದ್ದರು. ಇಂತಹ ಸಂದರ್ಭದಲ್ಲಿ ಹರ್ಮನ್‌ಪ್ರೀತ್ ಕೌರ್ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಕೌರ್ ಮ್ಯಾಜಿಕ್ ಇನ್ನಿಂಗ್ಸ್

ಐಸಿಸಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2017ರ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಹರ್ಮನ್‌ಪ್ರೀತ್ ಕೌರ್ 115 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳ ನೆರವಿನಿಂದ ಅಜೇಯ 171 ರನ್‌ಗಳ ಬಾರಿಸಿ ಭಾರತ ತಂಡದ ಗೆಲುವಿನ ಪ್ರಮುಖ ಪಾತ್ರವಹಿಸಿದ್ದರು. ಈ ಗೆಲುವಿನೊಂದಿಗೆ ಭಾರತ ಫೈನಲ್‌ಗೆ ತಲುಪಿತ್ತು. ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತೀಯ ಆಟಗಾರ್ತಿಯೊಬ್ಬರು ಗಳಿಸಿದ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಇದಾಗಿದೆ.

ಈಗ ಮತ್ತೊಮ್ಮೆ ಐಸಿಸಿ ಏಕದಿನ ಮಹಿಳಾ ವಿಶ್ವಕಪ್‌ 2025 ರ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಭಾರತ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಹರ್ಮನ್‌ಪ್ರೀತ್ ಕೌರ್ ಅವರಿಂದ ಮತ್ತೊಂದು ಮ್ಯಾಜಿಕ್ ಇನ್ನಿಂಗ್ಸ್ ನೋಡಲು ಟೀಮ್ ಇಂಡಿಯಾ ಅಭಿಮಾನಿಗಳು ಕಾಯುತ್ತಿದ್ದಾರೆ.