Last Updated:
ಮಿಚೆಲ್ ಮಾರ್ಷ್ ಹಾಗೂ ಐಡೆನ್ ಮಾರ್ಕ್ರಮ್ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 205 ರನ್ಗಳಿಸಿದೆ
ಮಿಚೆಲ್ ಮಾರ್ಷ್ ಹಾಗೂ ಐಡೆನ್ ಮಾರ್ಕ್ರಮ್ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 205 ರನ್ಗಳಿಸಿದೆ. ಪ್ಲೇ ಆಫ್ ಪ್ರವೇಶಿಸಲು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಲಖನೌ ಸೂಪರ್ ಜೈಂಟ್ಸ್ ಉತ್ತಮ ಆರಂಭ ಪಡೆಯಿತು. ಮಿಚೆಲ್ ಮಾರ್ಷ್ 39 ಎಸೆತಗಳಲ್ಲಿ 65 ರನ್ ಹಾಗೂ ಮಾರ್ಕ್ರಾಮ್ 38 ಎಸೆತಗಳಲ್ಲಿ 61 ರನ್ಗಳಿಸಿ ತಂಡ ಸವಾಲಿನ ಮೊತ್ತ ದಾಖಲಿಸಲು ನೆರವಾದರು.