Last Updated:
ಲಖನೌ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಗುಜರಾತ್ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಪರ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಅಬ್ಬರಿಸಿದರು.
ಇಂಡಿಯನ್ ಪ್ರೀಮಿಯರ್ ಲೀಗ್ನ 2025ನೇ ಸಾಲಿನ 64ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಗುಜರಾತ್ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಪರ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಅಬ್ಬರಿಸಿದರು.
ಹೌದು, ಟೂರ್ನಿಯುದ್ಧಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ ಮಿಚೆಲ್ ಮಾರ್ಷ್ ಇಂದಿನ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಸಂಭ್ರಮಿಸಿದರು. ಇದು ಈ ಬಾರಿಯ ಐಪಿಎಲ್ನಲ್ಲಿ ವಿದೇಶಿ ಆಟಗಾರನೊಬ್ಬ ಗಳಿಸಿದ ಮೊದಲ ಶತಕ ಎಂಬ ಖ್ಯಾತಿಗೆ ಅವರು ಪಾತ್ರರಾದರು. ಅಂದಹಾಗೆ ಈ ಬಾರಿಯ ಐಪಿಎಲ್ನಲ್ಲಿ ಇದುವರೆಗೆ 8 ಶತಗಳು ಮೂಡಿಬಂದಿದ್ದು, ಅದರಲ್ಲಿ ಈ ಮೊದಲು ದಾಖಲಾದ ಎಲ್ಲವೂ ಭಾರತೀಯ ಆಟಗಾರರೇ ಗಳಿಸಿದ ಶತಕವಾಗಿದೆ. ಇಂದಿನ ಶತಕದ ಮೂಲಕ ಈ ಬಾರಿ ಶತಕ ಗಳಿಸಿದ ಮೊದಲ ವಿದೇಶಿ ಆಟಗಾರ ಎನಿಸಿಕೊಂಡರು.
ಅಂತಿಮವಾಗಿ ಅವರು 64 ಎಸೆತಗಳಲ್ಲಿ 117 ರನ್ ಸಿಡಿಸಿ ಮಿಂಚಿದರು. ಇದರಲ್ಲಿ 8 ಸಿಕ್ಸರ್ ಹಾಗೂ 10 ಬೌಂಡರಿಗಳು ಸೇರಿವೆ. ಇನ್ನೂ ಮಿಚಲ್ ಮಾರ್ಷ್ ಅವರು ಇಂದಿನ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ವಿರುದ್ಧ ಶತಕ ಸಿಡಿಸುವ ಮೂಲಕ ಐಪಿಎಲ್ 2025ರಲ್ಲಿ ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎನಿಸಿಕೊಂಡರು. ಮಾತ್ರವಲ್ಲ, ಐಪಿಎಲ್ ಇತಿಹಾಸದಲ್ಲಿ ಮಿಚೆಲ್ ಮಾರ್ಷ್ ಅವರು ತಮ್ಮ ಮೊದಲ ಶತಕ ಸಿಡಿಸಿ ಸಂಭ್ರಮಿಸಿದರು.
ಮಿಚಲ್ ಮಾರ್ಷ್ ಅವರು ಇಂದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಲಖನೌ ಸೂಪರ್ ಜೈಂಟ್ಸ್ ಪರ ಶತಕ ಸಿಡಿಸಿದ 5 ಆಟಗಾರ ಎಂಬ ಹೆಗ್ಗಳಿಗೆ ಪಾತ್ರರಾದರು. ಇದಕ್ಕೂ ಮೊದಲು ಕೆಎಲ್ ರಾಹುಲ್ 2, ಕ್ವಿಂಟನ್ ಡಿ ಕಾಕ್ 1 ಹಾಗೂ ಮಾರ್ಕಸ್ ಸ್ಟೋಯಿನಿಸ್ 1 ಶತಕ ಸಿಡಿಸಿದ್ದರು.