Last Updated:
ಆಸ್ಟ್ರೇಲಿಯಾದ ಟಿ20 ಕ್ರಿಕೆಟ್ ಇತಿಹಾಸದಲ್ಲಿ ವೇಗಿ ಜೋಶ್ ಹೇಜಲ್‌ವುಡ್ ಎರಡನೇ ಅತ್ಯಂತ ಯಶಸ್ವಿ ಬೌಲರ್ಸ್ ಎನಿಸಿಕೊಂಡಿದ್ದಾರೆ.
ಮೇಲ್ಬೋರ್ನ್ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ(Australia vs India) ಹೀನಾಯ ಸೋಲು ಅನುಭವಿಸಿತು. ಟೀಮ್ ಇಂಡಿಯಾ(Team India) ಬ್ಯಾಟರ್ಸ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾದರು. ಅಭಿಷೇಕ್ ಶರ್ಮಾ(Abhishek Sharma) ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟರ್ಸ್ ಉತ್ತಮ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾದ ಬೌಲರ್‌ಗಳು ಪಂದ್ಯದಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದರು. ವಿಶೇಷವಾಗಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bengaluru) ತಂಡದ ಪರ ಆಡುವ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್ವುಡ್(Josh Hazlewood) ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು.
ಜೋಶ್ ಹೇಜಲ್ವುಡ್ ಅವರ ಮಾರಕ ಬೌಲಿಂಗ್ ವಿರುದ್ಧ ಪವರ್‌ಪ್ಲೇನಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟರ್ಸ್ ಔಟಾದರು. ಟೀಮ್ ಇಂಡಿಯಾ ಟಿ20 ನಾಯಕ ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್ ಮತ್ತು ತಿಲಕ್ ವರ್ಮಾ ಅವರನ್ನು ಜೋಶ್ ಹೇಜಲ್ವುಡ್ ಔಟ್ ಮಾಡಿದರು. ಈ ಮೂಲಕ ಜೋಶ್ ಹೇಜಲ್‌ವುಡ್ ಆಸ್ಟ್ರೇಲಿಯಾದ ಟಿ20 ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದರು.
ಯಶಸ್ವಿ ಬೌಲರ್
ಜೋಶ್ ಹೇಜಲ್‌ವುಡ್ ಆಸ್ಟ್ರೇಲಿಯಾದ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಅತ್ಯಂತ ಯಶಸ್ವಿ ಬೌಲರ್ಸ್ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ಸ್ ಪಟ್ಟಿಯಲ್ಲಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರನ್ನು ಹೇಜಲ್ವುಡ್ ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ಸ್ ಪಟ್ಟಿಯಲ್ಲಿ ಆಡಮ್ ಜಂಪಾ ಅಗ್ರಸ್ಥಾನದಲ್ಲಿದ್ದಾರೆ. ಅವರು 106 ಪಂದ್ಯಗಳ 104 ಇನ್ನಿಂಗ್ಸ್‌ಗಳಲ್ಲಿ 131 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಜಂಪಾ ಅವರ ಅತ್ಯುತ್ತಮ ಪ್ರದರ್ಶನವೆಂದರೆ 19 ರನ್ಗಳಿಗೆ 5 ವಿಕೆಟ್ ಪಡೆದಿರುವುದು. ಅವರು ಎರಡು ಬಾರಿ 4 ವಿಕೆಟ್ ಪಡೆದಿದ್ದು, ಒಮ್ಮೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
October 31, 2025 11:05 PM IST