Last Updated:
ಐಪಿಎಲ್‌ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಐಪಿಎಲ್‌ನ 12ನೇ ಪಂದ್ಯದಲ್ಲಿ ಇಂದು (ಮಾರ್ಚ್ 31) ಮುಂಬೈನ ವಾಂಕೆಡೆ (Wankede) ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಿವೆ. ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಆಡಿರುವ ಉಭಯ ತಂಡಗಳ ಪೈಕಿ, ಕೆಕೆಆರ್ 1 ಗೆಲುವು ಸಾಧಿಸಿದ್ದರೆ. ಮುಂಬೈ ಇನ್ನೂ ಕೂಡ ಮೊದಲ ಗೆಲುವಿನ ವಿಶ್ವಾಸದಲ್ಲಿದೆ. ಈ ನಡುವೆ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ನಾಯಕ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಬಾರಿಯ ಐಪಿಎಲ್‌ನಲ್ಲಿ ಇದುವರೆಗೂ 2 ಪಂದ್ಯಗಳನ್ನು ಆಡಿರುವ ಮುಂಬೈ ಇಂಡಿಯನ್ಸ್ ಎರಡರಲ್ಲೂ ಸೋಲು ಅನುಭವಿಸಿದೆ. ಆ ಮೂಲಕ ಪಾಯಿಂಟ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ. ಸದ್ಯ ಟಾಸ್ ಗೆದ್ದಿರುವ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮಾತ್ರವಲ್ಲ ಇಂದಿನ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಉತ್ತಮ ಬೌಲಿಂಗ್ ಮಾಡಿದ್ದ ವಿಘ್ನೇಶ್ ಪುತೂರ್ ಅವರನ್ನು ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಿದ್ದಾರೆ.
ಇನ್ನೊಂದೆಡೆ ಕಳೆದ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಸೋಲು ಇನ್ನೊಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಕೆಲ್ಕೊತ್ತಾ ತಂಡಕ್ಕೆ ಆಲ್ರೌಂಡರ್ ಸುನಿಲ್ ನರೈನ್ ಗಾಯದಿಂದ ಚೇತರಿಸಿಕೊಂಡಿದ್ದು, ಅವರು ಮೋಯಿನ್ ಅಲಿ ಸ್ಥಾನದಲ್ಲಿ ತಂಡಕ್ಕೆ ಮರಳಿದ್ದಾರೆ.
ಇದನ್ನೂ ಓದಿ: IPL 2025: RCB ವಿರುದ್ಧ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದು ಈ ಒಂದೇ ಕಾರಣಕ್ಕೆ! ಅಸಲಿ ಕಾರಣ ಬಿಚ್ಚಿಟ್ರು CSK ಕೋಚ್
ಇಂದಿನ ಪಂದ್ಯದಲ್ಲಿನ ಪ್ಲೇಯಿಂಗ್ 11 ನೋಡುವುದಾದ್ರೆ
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೀ), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರಿಯಾನ್ ರಿಕೆಲ್ಟನ್, ವಿಲ್ ಜಾಕ್ಸ್(ವಿಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್, ವಿಘ್ನೇಶ್ ಪುತೂರ್‌ಗೆ ಅವಕಾಶ ನೀಡಲಾಗಿದೆ.
March 31, 2025 7:05 PM IST