Last Updated:
ಪಂಜಾಬ್ ಕಿಂಗ್ಸ್ ಪಿಬಿಕೆಎಸ್ ತಂಡ ಪ್ರಭಸಿಮ್ರನ್ ಸಿಂಗ್ ಮತ್ತು ಪ್ರಿಯಾಂಶ್ ಆರ್ಯ ಅರ್ಧಶತಕಗಳ ನೆರವಿನಿಂದ 201 ರನ್ ಗಳಿಸಿದೆ. ಕೆಕೆಆರ್ ಗೆ 202 ರನ್ ಗುರಿ ನೀಡಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಈಡನ್ ಗಾರ್ಡರ್ನ್ಸ್ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 201 ರನ್ಗಳಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಿಬಿಕೆಎಸ್ ತಂಡ ಆರಂಭಿಕರಾದ ಪ್ರಿಯಾಂಶ್ ಆರ್ಯ ಹಾಗೂ ಪ್ರಭಸಿಮ್ರನ್ ಸಿಂಗ್ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಕೆಕೆಆರ್ಗೆ 202 ರನ್ಗಳ ಗುರಿ ನೀಡಿದೆ.
ಪ್ರಭಸಿಮ್ರನ್ ಸಿಂಗ್ 49 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ಗಳ ಸಹಿತ 83 ರನ್ಗಳಿಸಿದರೆ, ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್ಗಳ ಸಹಿತ 69 ರನ್ಗಳಿಸಿದರು. ಶ್ರೇಯಸ್ ಅಯ್ಯರ್ 16 ಎಸೆತಗಳಲ್ಲಿ ತಲಾ 1 ಬೌಂಡರಿ, ಸಿಕ್ಸರ್ ಸಹಿತ ಅಜೇಯ 25 ರನ್ಗಳಿಸಿದರು.
First Published :
April 26, 2025 9:21 PM IST