Last Updated:
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳಿಸಲಷ್ಟೇ ಶಕ್ತವಾಯಿತು
ಬಲಿಷ್ಠ ತಂಡಗಳಾದ ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಗುಜರಾತ್ ಟೈಟಾನ್ಸ್ (Gujarat Titans) ಐಪಿಎಲ್ 2025ರ (IPL 2025) 56 ನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಗುಜರಾತ್ ಟೈಟನ್ಸ್ ಗೆಲುವಿಗೆ 156 ರನ್‌ಗಳ ಗುರಿ ನೀಡಿತು.
ಇನ್ನೂ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡ ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಆರಂಭಿಕರಾದ ರಿಯಾನ್ ರಿಕಲ್ಟನ್ 2, ರೋಹಿತ್ ಶರ್ಮಾ ಕೇವಲ 7 ರನ್ ಸಿಡಿಸಿ ಔಟ್ ಆದರು. ಆದ್ರೆ ಮೂರನೇ ವಿಕೆಟ್‌ಗೆ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ವಿಲ್ ಜಾಕ್ಸ್ 71 ರನ್‌ಗಳ ಜೊತೆಯಾಟ ಆಡುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿಗೆ ತಂದು ನಿಲ್ಲಿಸಿದರು. ಈ ವೇಳೆ ಅರ್ಧಶತಕ ಸಿಡಿಸಿದ್ದ ಜ್ಯಾಕ್ಸ್ ಔಟ್ ಆದ ಬಳಿಕ ಯಾವೊಬ್ಬ ಬ್ಯಾಟರ್ ಕೂಡ ಕ್ರೀಸ್ ಕಚ್ಚಿ ನಿಲ್ಲಲಿಲ್ಲ ಪರಿಣಾಮ ಮುಂಬೈ ಇಂಡಿಯನ್ಸ್ ಕೇವಲ 155 ರನ್ ಗಳಿಸಲಷ್ಟೇ ಶಕ್ತವಾಯಿತು.
ಗುಜರಾತ್ ಟೈಟನ್ಸ್ ಪರ ಆರ್ ಕಿಶೋರ್ 2, ರಶೀದ್ ಖಾನ್, ಪ್ರಸಿದ್ಧ್ ಕೃಷ್ಣ, ಗೋಟ್ಜೈ, ಮೊಹಮ್ಮದ್ ಸಿರಾಜ್ ಹಾಗೂ ಅರ್ಷದ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ಶುಭ್ಮನ್ ಗಿಲ್ (ನಾಯಕ), ಬಿ ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಜೆರಾಲ್ಡ್ ಕೋಟ್ಜಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ರಿಯಾನ್ ರಿಕೆಲ್ಟನ್ (ವಿಕೀ), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಕಾರ್ಬಿನ್ ಬಾಷ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.