PBKS vs MI: ಪಂಜಾಬ್ ಬೌಲರ್​ಗಳಿಗೆ ಪರದಾಡಿದ ಮುಂಬೈಗೆ ಸೂರ್ಯ, ನಮನ್ ಆಸರೆ! ಪಂಜಾಬ್​ಗೆ ಸವಾಲಿನ ಗುರಿ ನೀಡಿದ ಮುಂಬೈ | suryakumara yadav fifty helps mumbai set 185 target for punjab kings

PBKS vs MI: ಪಂಜಾಬ್ ಬೌಲರ್​ಗಳಿಗೆ ಪರದಾಡಿದ ಮುಂಬೈಗೆ ಸೂರ್ಯ, ನಮನ್ ಆಸರೆ! ಪಂಜಾಬ್​ಗೆ ಸವಾಲಿನ ಗುರಿ ನೀಡಿದ ಮುಂಬೈ | suryakumara yadav fifty helps mumbai set 185 target for punjab kings

ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಸ್ಫೋಟಕ ಆರಂಭ ಪಡೆಯಲು ವಿಫಲವಾಯಿತು. ಮೊದಲ ವಿಕೆಟ್​ಗೆ ರೋಹಿತ್​-ರಯಾನ್ ರಿಕಲ್ಟನ್ ಜೋಡಿ 45 ರನ್​ಗಳ ಜೊತೆಯಾಟ ನಡೆಸಿತು. ರಿಕಲ್ಟನ್ 20 ಎಸೆತಗಳಲ್ಲಿ​ 5 ಬೌಂಡರಿಗಳ ಸಹಿತ 27 ರನ್​ಗಳಿಸಿ ಔಟ್ ಆದರು. ರೋಹಿತ್ ಶರ್ಮಾ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಮತ್ತೊಮ್ಮೆ ವಿಫಲರಾದರು. ಶರ್ಮಾ 22 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 24 ರನ್​ಗಳಿಸಿ ಔಟ್ ಆದರು. ನಂತರ ಬಂದ ತಿಲಕ್ ವರ್ಮಾ ಕೇವಲ 1 ರನ್​ಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ವಿಲ್ ಜಾಕ್ಸ್ ಕೂಡ 8 ಎಸೆತಗಳಲ್ಲಿ 17 ರನ್​ಗಳಿಸಿ ಔಟ್ ಆದರು.

ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿದ್ದ ಮುಂಬೈಗೆ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಚೇತರಿಕೆ ನೀಡಿದರು. ಇವರಿಬ್ಬರು 5ನೇ ವಿಕೆಟ್ ಜೊತೆಯಾಟದಲ್ಲಿ 23 ಎಸೆತಗಳಲ್ಲಿ 44 ರನ್​ಗಳಿಸಿದರು. ಪಾಂಡ್ಯ 15 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸೇರಿ 26 ರನ್​ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಸೂರ್ಯಕುಮಾರ್ ಹಾಗೂ ನಮನ್ ಧೀರ್ ಜೋಡಿ 6ನೇ ವಿಕೆಟ್ ಜೊತೆಯಾಟದಲ್ಲಿ 17 ಎಸೆತಗಳಲ್ಲಿ 31 ರನ್​ ಸೇರಿಸಿದರು. ನಮನ್ 12 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 20 ರನ್​ಗಳಿಸಿದರು. ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್​ಗಳ ಸಹಿತ 57 ರನ್​ಗಳಿಸಿ ಕೊನೆಯ ಎಸೆತದಲ್ಲಿ ಅರ್ಶದೀಪ್​ ಸಿಂಗ್​ಗೆ ವಿಕೆಟ್ ಒಪ್ಪಿಸಿದರು.

ಪಂಜಾಬ್ ಕಿಂಗ್ಸ್ ಪರ ಅರ್ಷದೀಪ್ ಸಿಂಗ್ 28ಕ್ಕೆ2, ಮಾರ್ಕೊ ಜಾನ್ಸನ್ 34ಕ್ಕೆ2, ವೈಶಾಕ್ ವಿಜಯಕುಮಾರ್ 44ಕ್ಕೆ2,  ಹರ್​ಪ್ರೀತ್ ಬ್ರಾರ್ 36ಕ್ಕೆ1 ವಿಕೆಟ್ ಪಡೆದು ಮಿಂಚಿದರು.

ಹೆಡ್​ ಟು ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ ಮುಂಬೈ ಮತ್ತು ಪಂಜಾಬ್ ನಡುವೆ ಇದುವರೆಗೆ 32 ಪಂದ್ಯಗಳು ನಡೆದಿವೆ. ಇದರಲ್ಲಿ ಮುಂಬೈ 17 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ 15 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಅಂಕಿಅಂಶಗಳನ್ನ ನೋಡಿದರೆ ಈ ಪಂದ್ಯವು ತುಂಬಾ ರೋಮಾಂಚಕಾರಿಯಾಗುವ ನಿರೀಕ್ಷೆಯಿದೆ.

ಜೈಪುರದಲ್ಲಿ ಎರಡೂ ತಂಡಗಳ ದಾಖಲೆ

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ PBKS ಮತ್ತು MI ತಂಡಗಳು ಉತ್ತಮ ದಾಖಲೆಯನ್ನು ಹೊಂದಿಲ್ಲ. ಪಂಜಾಬ್ ಇಲ್ಲಿ 8 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಎರಡರಲ್ಲಿ ಮಾತ್ರ ಗೆದ್ದು 6ರಲ್ಲಿ ಸೋತಿದೆ.  ಮುಂಬೈ 11 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಏಳರಲ್ಲಿ ಸೋತಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ನೆಹಾಲ್ ವಧೇರಾ,  ಮಾರ್ಕಸ್ ಸ್ಟೊಯಿನಿಸ್, ಕೈಲ್ ಜೇಮಿಸನ್, ಮಾರ್ಕೊ ಜಾನ್ಸನ್,   ಅರ್ಶ್ದೀಪ್ ಸಿಂಗ್, ವೈಶಾಖ್ ವಿಜಯ್ ಕುಮಾರ್.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಕಾರ್ಬಿನ್ ಬಾಷ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ