Last Updated:
ಬಲಿಷ್ಠ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು
ಇಂಡಿಯನ್ ಪ್ರೀಮಿಯರ್ ಲೀಗ್ 2025ನೇ ಸಾಲಿನ 59ನೇ ಪಂದ್ದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ಮಾಡಿದ ನೆಹಾಲ್ ವಧೇರಾ ಹಾಗೂ ಶಶಾಂಕ್ ಸಿಂಗ್ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ ಕಿಗ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಆ ಮೂಲಕ ರಾಜಸ್ಥಾನ ಗೆಲುವಿಗೆ 220 ರನ್‌ಗಳ ಬೃಹತ್ ಟಾರ್ಗೆಟ್ ನೀಡಿದೆ.