RCB Victory Parade Stampede: RCB ವಿರುದ್ಧ ಎಫ್ಐಆರ್! ಕಾಲ್ತುಳಿತ ಪ್ರಕರಣದಲ್ಲಿ KSCA ವಿರುದ್ಧವೂ ತನಿಖೆಗೆ ಮುಂದಾದ ಪೊಲೀಸ್ | RCB Victory Celebration Stampede FIR Filed in kabban park police Station

RCB Victory Parade Stampede: RCB ವಿರುದ್ಧ ಎಫ್ಐಆರ್! ಕಾಲ್ತುಳಿತ ಪ್ರಕರಣದಲ್ಲಿ KSCA ವಿರುದ್ಧವೂ ತನಿಖೆಗೆ ಮುಂದಾದ ಪೊಲೀಸ್ | RCB Victory Celebration Stampede FIR Filed in kabban park police Station

Last Updated:

RCB ತಂಡ 18 ವರ್ಷಗಳ ಬಳಿಕ ಮೊದಲ ಐಪಿಎಲ್ ಟ್ರೋಫಿ ಗೆದ್ದಿದೆ. ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಪೊಲೀಸ್ ಇಲಾಖೆ ಯುಡಿಆರ್ ಬದಲು ಎಫ್‌ಐಆರ್ ದಾಖಲಿಸಿದೆ.

ಸಾಂದರ್ಭಿಕ ಚಿತ್ರಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ತಮ್ಮ ಮೊದಲ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ದುರಂತ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಯುಡಿಆರ್ ಬದಲು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ನಿನ್ನೆ ಯುಡಿಆರ್ ಇಂದು ಎಫ್‌ಐಆರ್

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಕೊನೆಗೂ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಕಾಲ್ತುಳಿತ ಪ್ರಕರಣದ ಯುಡಿಆರ್ ಬದಲು ಎಫ್‌ಐಆರ್ ದಾಖಲಿಸಿಕೊಂಡಿದೆ. RCB ಫ್ರ್ಯಾಂಚೈಸಿ, KSCA ಹಾಗೂ ಡಿಎನ್‌ಎ ಮ್ಯಾನೇಜ್‌ಮೆಂಟ್ ವಿರುದ್ಧ FIR ದಾಖಲಿಸಿದ್ದಾರೆ.

ಸುಮೋಟೋ ಕೇಸ್ ದಾಖಲಿಸಿಕೊಂಡ ಪೊಲೀಸರು

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, BNS ಕಾಯ್ದೆ 106 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ನೆಗ್ಲಿಜೆನ್ಸ್ ಅಡಿಯಲ್ಲಿ ಕೂಡ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದಾರೆ. ಇದೇ ಘಟನೆಗೆ ಸಂಬಂಧಿಸಿದಂತೆ ಜೂನ್ 4 ರಂದು ಪೊಲೀಸರು ಯುಡಿಆರ್ ದಾಖಲಿಸಿದ್ದರು. ಇಂದು ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

(ವರದಿ: ಮಂಜು, ನ್ಯೂಸ್18 ಕನ್ನಡ, ಬೆಂಗಳೂರು)