ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ ಪವರ್ ಪ್ಲೇ ನಲ್ಲಿ ಇಂದು ಇಂದು ವಿಕೆಟ್ ಕಳೆದುಕೊಳ್ಳದೇ ಆಡಿತು. ಈ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಆರ್‌ಸಿಬಿ ಮೊದಲ 6 ಓವರ್ಗಳಲ್ಲಿ ವಿಕೆಟ್ ಕಳೆದುಕೊಳ್ಳದೇ ಆಡಿತು. ಆದರೆ ಫಿಲ್ ಸಾಲ್ಟ್ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಆಡುವಲ್ಲಿ ವಿಫಲರಾದರು. 23 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 26 ರನ್ಗಗಳಿಸಿ ಹಸರಂಗ ಬೌಲಿಂಗ್ನಲ್ಲಿ ಔಟ್ ಆದರು.
ಆದರೆ 2ನೇ ವಿಕೆಟ್ಗೆ ಒಂದಾದ ವಿರಾಟ್-ದೇವದತ್ ಪಡಿಕ್ಕಲ್ ಅದ್ಭುತ ಜೊತೆಯಾಟ ನೀಡಿದರು. ಇವರಿಬ್ಬರು 51 ಎಸೆತಗಳಲ್ಲಿ 95 ರನ್ಗಳ ಜೊತೆಯಾಟ ನೀಡಿದರು. ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ 73 ರನ್ಗಳಿಸಿದ್ದ ವಿರಾಟ್ ಇಂದೂ 42 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ಗಳ ಸಹಿತ 70 ರನ್ಗಳಿಸಿ ಜೋಫ್ರಾ ಆರ್ಚರ್ಗೆ ವಿಕೆಟ್ ನೀಡಿದರು. ದೇವದತ್ ಪಡಿಕ್ಕಲ್ ಕೂಡ ಕೊಹ್ಲಿ ಔಟ್ ಆದ ಮುಂದಿನ ಓವರ್ನಲ್ಲೇ ಸಂದೀಪ್ ಶರ್ಮಾಗೆ ವಿಕೆಟ್ ನೀಡಿದರು. ಅವರು 27 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ಗಳ ಸಹಿತ 50 ರನ್ಗಳಿಸಿದರು. ಆದರೆ ನಾಯಕ ರಜತ್ ಕೇವಲ 1 ರನ್ಗಳಿಸಿ ಅದೇ ಓವರ್ನಲ್ಲಿ ಔಟ್ ಆದರು.
ಕೊನೆಯಲ್ಲಿ ಅಬ್ಬರಿಸಿದ ಟಿಮ್ ಡೇವಿಡ್ ಹಾಗೂ ಜಿತೇಶ್ ಶರ್ಮಾ 19 ಎಸೆತಗಳಲ್ಲಿ 42 ರನ್ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಡೇವಿಡ್ 15 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 23 ರನ್ಗಳಿಸಿದರೆ, ಜಿತೇಶ್ ಶರ್ಮಾ 10 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ ಅಜೇಯ 20 ರನ್ಗಳಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಸಂದೀಪ್ ಶರ್ಮಾ 45ಕ್ಕೆ2, ವನಿಂದು ಹಸರಂಗ 30ಕ್ಕೆ1, ಜೋಫ್ರಾ ಆರ್ಚರ್
ಹೆಡ್ ಟು ಹೆಡ್ ದಾಖಲೆಗಳು
ಆರ್‌ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳ ನಡುವೆ 30 ಪಂದ್ಯಗಳು ನಡೆದಿವೆ. ಆ ಪೈಕಿ ಆರ್‌ಸಿಬಿ 16 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ರಾಜಸ್ಥಾನ ಇನ್ನೂ 14 ಪಂದ್ಯಗಳನ್ನು ಗೆದ್ದಿದೆ. ಈ ಎರಡೂ ತಂಡಗಳ ನಡುವಿನ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿತ್ತು.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭಂ ದುಬೆ, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಫಜಲ್ಹಕ್ ಫರೂಕಿ, ಅರ್ಷದೀಪ್ ಸಿಂಗ್, ಸಂದೀಪ್ ಶರ್ಮಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಯಶ್ ದಯಾಳ್
April 24, 2025 9:23 PM IST