Last Updated:
ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2025ರ 65ನೇ ಪಂದ್ಯದಲ್ಲಿ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ರಜತ್ ಪಾಟೀದಾರ್ ಇಲ್ಲದೆ ಜಿತೇಶ್ ಶರ್ಮಾ ನಾಯಕತ್ವ ವಹಿಸಿದ್ದಾರೆ.
ಐಪಿಎಲ್ 2025ರ 65ನೇ ಪಂದ್ಯ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅಂಕಪಟ್ಟಿಯಲ್ಲಿ ಅಗ್ರ 2 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆರ್‌ಸಿಬಿ ಇಂದು ಖಾಯಂ ನಾಯಕ ರಜತ್ ಪಾಟೀದಾರ್ ಇಲ್ಲದೆ ಕಣಕ್ಕಿಳಿಯುತ್ತಿದೆ. ಪಾಟೀದಾರ್ ಬದಲಿಗೆ ಜಿತೇಶ್ ಶರ್ಮಾ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಮತ್ತೊಂದು ಖುಷಿಯ ವಿಚಾರವೆಂದರೆ ಇತ್ತೀಚೆಗೆ ತಂಡ ಸೇರಿಕೊಂಡಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡ ಸೇರಿಕೊಂಡಿದ್ದಾರೆ.ಪ್ರಸಕ್ತ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ಗೆಲುವಿನೊಂದಿಗೆ ತಮ್ಮ ಅಭಿಯಾನವನ್ನು ಕೊನೆಗೊಳಿಸಲು ಬಯಸುತ್ತಿದೆ.
ಆರ್‌ಸಿಬಿ ಐಪಿಎಲ್ ಪುನಾರಂಭದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಏಪ್ರಿಲ್ 3ರಂದು ಕೊನೆಯ ಬಾರಿ ಕಣಕ್ಕಿಳಿದಿತ್ತು. ಇದೀಗ 20 ದಿನಗಳ ವಿರಾಮದ ಬಳಿಕ ಮತ್ತೆ ಮೈದಾನಕ್ಕೆ ಇಳಿದಿದೆ.
ಪ್ಲೇಯಿಂಗ್ ಇಲೆವೆನ್
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (WK), ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ಅಭಿನವ್ ಮನೋಹರ್, ಪ್ಯಾಟ್ ಕಮಿನ್ಸ್ (ಸಿ), ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಎಶನ್ ಮಾಲಿಂಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ಸಿ ಮತ್ತು ವಿಕೆ), ರೊಮಾರಿಯೋ ಶೆಫರ್ಡ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್, ಸುಯಶ್ ಶರ್ಮಾ
RCB vs SRH: ಹೊಸ ನಾಯಕನ ನೇತೃತ್ವದಲ್ಲಿ SRH ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ! ಕನ್ನಡಿಗನಿಗೂ ಸಿಕ್ತು ಚಾನ್ಸ್