Last Updated:
ಟೀಮ್ ಇಂಡಿಯಾದ ಏಕದಿನ ನಾಯಕತ್ವವನ್ನು ಕಳೆದುಕೊಂಡ ನಂತರ ರೋಹಿತ್ ಶರ್ಮಾ ವಾರ್ಷಿಕ ಸಿಇಎಟಿ ಕ್ರಿಕೆಟ್ ರೇಟಿಂಗ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಅಕ್ಟೋಂಬರ್ 7 ರಂದು ಮುಂಬೈ (Mumbai)ನಲ್ಲಿ ಅದ್ಧೂರಿಯಾಗಿ 27ನೇ ವಾರ್ಷಿಕ ಸಿಯೆಟ್ (CEAT) ಕ್ರಿಕೆಟ್ (Cricket) ರೇಟಿಂಗ್ ಪ್ರಶಸ್ತಿ (Awards) ಪ್ರಧಾನ ಸಮಾರಂಭ ನಡೆಯಿತು. ವಿಶ್ವದ ಹಲವು ಕ್ರಿಕೆಟಿಗರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಟೀಮ್ ಇಂಡಿಯಾ (Team India)ದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಪ್ರಶಸ್ತಿ ಪ್ರಧಾನ ಸಮಾರಂಭದ ಕೇಂದ್ರ ಬಿಂದುವಾಗಿದ್ದರು. ಈ ವರ್ಷದ ಆರಂಭದಲ್ಲಿ ಚಾಂಪಿಯನ್ಸ್ ಟ್ರೋಫಿ (Champions Trophy) ಗೆಲುವಿನತ್ತ ಭಾರತ ತಂಡವನ್ನು ಮುನ್ನಡೆಸಿದ್ದಕ್ಕಾಗಿ 38 ವರ್ಷದ ರೋಹಿತ್ ಶರ್ಮಾ ಅವರನ್ನು ವಿಶೇಷ ಪ್ರಶಸ್ತಿಯೊಂದಿಗೆ ಸನ್ಮಾನಿಸಲಾಯಿತು.
ವಾರ್ಷಿಕ ಸಿಯೆಟ್ ಕ್ರಿಕೆಟ್ ರೇಟಿಂಗ್ ಪ್ರಶಸ್ತಿಗಳ ಸಮಾರಂಭದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದು ಕೂಡ ಗಮನಾರ್ಹವಾಗಿತ್ತು. ಏಕೆಂದರೆ ಏಕದಿನ ನಾಯಕತ್ವದಿಂದ ಕೆಳಗಿಳಿದ ನಂತರ ಅವರ ಮೊದಲ ಸಾರ್ವಜನಿಕ ಪ್ರದರ್ಶನ ಇದಾಗಿದೆ. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಹಿತ್ ಶರ್ಮಾ ಎಂಟ್ರಿ ನೋಡಿ ಎಲ್ಲರೂ ಶಾಕ್ ಆಗಿದ್ದರು. ಫಿಟ್ ಲುಕ್ ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದರು.
ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ರೋಹಿತ್ ಶರ್ಮಾ ತಮ್ಮ ಏಕದಿನ ನಾಯಕತ್ವವನ್ನು ಕಳೆದುಕೊಳ್ಳಬೇಕಾಯಿತು. ಫಿಟ್ನೆಸ್ ಮತ್ತು ಫಾರ್ಮ್ ಸಮಸ್ಯೆಗಳಿಂದ ರೋಹಿತ್ ಶರ್ಮಾ ನಾಯಕತ್ವ ಕಳೆದುಕೊಂಡಿದ್ದಾರೆ ಎಂದು ಕ್ರಿಕೆಟ್ ಪಂಡಿತರು ಚರ್ಚೆ ನಡೆಸಿದ್ದರು. ಆದರೆ, ಸಿಯೆಟ್ ಕ್ರಿಕೆಟ್ ರೇಟಿಂಗ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಹಿತ್ ಶರ್ಮಾ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ.
ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರಿಗೆ ತಿರುಗೇಟು ನೀಡಲು ರೋಹಿತ್ ಶರ್ಮಾ ಸಜ್ಜಾಗಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅಬ್ಬರಿಸಲಿದ್ದಾರೆ. ಫಿಟ್ನೆಸ್ ಬಗ್ಗೆ ಹುಟ್ಟುಕೊಂಡಿದ್ದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿಲು ರೋಹಿತ್ ಶರ್ಮಾ ತಯಾರಾಗುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
ಕಳೆದ ಶನಿವಾರ, ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಕ್ಟೋಬರ್ 19 ರಿಂದ ಪ್ರಾರಂಭವಾಗುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಈ ವೇಳೆ ಬಿಸಿಸಿಐ ರೋಹಿತ್ ಶರ್ಮಾ ಬದಲಿಗೆ ಶುಭಮನ್ ಗಿಲ್ ಅವರನ್ನು ಭಾರತ ತಂಡದ ಹೊಸ ಏಕದಿನ ನಾಯಕನನ್ನಾಗಿ ಅಧಿಕೃತವಾಗಿ ಘೋಷಿಸಿತು.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಜೊತೆಗೆ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ತಂಡಕ್ಕೆ ಮರಳಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ರೋಹಿತ್ ಶಮಾ ಫಿಟ್ ಆಗಿ ಕಾಣಿಸಿಕೊಂಡಿರುವುದು ಮಾತ್ರ ಅವರ ಅಭಿಮಾನಿಗಳಿಗೆ ಸಂತಸ ತರಿಸಿದೆ.
October 08, 2025 5:09 PM IST
Rohit Sharma: ಅವಾರ್ಡ್ ಫಂಕ್ಷನ್ಗೆ ಬಂದ ರೋಹಿತ್ ನೋಡಿ ಎಲ್ರೂ ಶಾಕ್; ಗಂಭೀರ್-ಅಗರ್ಕರ್ಗೆ ತಿರುಗೇಟು ಕೊಡಲು ಹಿಟ್ಮ್ಯಾನ್ ಸಜ್ಜಾದ್ರ?