Last Updated:
26 ವರ್ಷದ ಈ ಯುವ ಬ್ಯಾಟರ್, ಭಾರತ ತಂಡದ ಟೆಸ್ಟ್ ನಾಯಕತ್ವಕ್ಕೆ ಬಂದ ನಂತರ ರನ್ಸ್‌ಗಳನ್ನು ಸುಲಭವಾಗಿ ಗಳಿಸುತ್ತಿದ್ದಾರೆ. ಈ ಶತಕದೊಂದಿಗೆ ಅವರು ಹಲವು ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ. ವಿಶೇಷವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ಶತಕಗಳ ದಾಖಲೆಯನ್ನು ನಿರ್ಮಿಸಿದ್ದಾರೆ.
ಭಾರತದ ಟೆಸ್ಟ್ ನಾಯಕ ಶುಭ್ಮನ್ ಗಿಲ್ ಅವರು ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ 10ನೇ ಟೆಸ್ಟ್ ಶತಕವನ್ನು ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. 196 ಎಸೆತಗಳನ್ನ ಎದುರಿಸಿದ ಗಿಲ್, 16 ಬೌಂಡರಿ, 2 ಸಿಕ್ಸರ್ಗಳ ಸಹಿತ ಅಜೇಯ 129 ರನ್ಗಳಿಸಿದ್ದರು.
26 ವರ್ಷದ ಈ ಯುವ ಬ್ಯಾಟರ್, ಭಾರತ ತಂಡದ ಟೆಸ್ಟ್ ನಾಯಕತ್ವಕ್ಕೆ ಬಂದ ನಂತರ ರನ್ಸ್‌ಗಳನ್ನು ಸುಲಭವಾಗಿ ಗಳಿಸುತ್ತಿದ್ದಾರೆ. ಈ ಶತಕದೊಂದಿಗೆ ಅವರು ಹಲವು ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ. ವಿಶೇಷವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ಶತಕಗಳ ದಾಖಲೆಯನ್ನು ನಿರ್ಮಿಸಿದ್ದಾರೆ.
ಭಾರತದ ಪರ ಒಂದೇ ವರ್ಷದಲ್ಲಿ ಹೆಚ್ಚು ಶತಕ ಸಿಡಿಸಿದ ನಾಯಕ ಎಂಬ ದಾಖಲೆಗೆ ಗಿಲ್ ಕೊಹ್ಲಿ ಜೊತೆ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಕೂಡ ಕ್ಯಾಲೆಂಡರ್ ವರ್ಷದಲ್ಲಿ ನಾಯಕನಾಗಿ 2 ಬಾರಿ 5 ಶತಕ ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ 1997ರಲ್ಲಿ 4 ಶತಕ ಸಿಡಿಸಿದ್ದಾರೆ.
ಗಿಲ್ರ ಈ ಶತಕವು WTC ಇತಿಹಾಸದಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ಶತಕಗಳ ದಾಖಲೆಯನ್ನು ನಿರ್ಮಿಸಿದ್ದು, ಈ ಮೂಲಕ ರೋಹಿತ್ ಶರ್ಮಾರ 9 ಶತಕಗಳ ದಾಖಲೆಯನ್ನ ಬ್ರೇಕ್ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ 7 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
WTC ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕ ಸಿಡಿಸಿದ ಪಟ್ಟಿಯಲ್ಲಿ ರೋಹಿತ್, ಕೊಹ್ಲಿ, ಬಾಬರ್ ಅಜಮ್ರನ್ನ ಹಿಂದಿಕ್ಕಿದ್ದಾರೆ. ಈ ಶತಕವು ಅವರ 5ನೇ WTC ನಾಯಕತ್ವದ ಶತಕವಾಗಿದ್ದು, ಪಾಕಿಸ್ಥಾನ ನಾಯಕ ಬಾಬರ್ ಅಜಮ್-ರೋಹಿತ್ ಅವರ 4 ಶತಕಗಳ ದಾಖಲೆಯನ್ನು ಮೀರಿಸಿದ್ದಾರೆ.
ಇಂಗ್ಲೆಂಡ್ ನಾಯಕ ಜೋ ರೂಟ್ 8 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇದರೊಂದಿಗೆ ಗಿಲ್ WTC ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಶ್ರೀಲಂಕಾದ ದಿಮುತ್ ಕರುಣಾರತ್ನೆ 6 ಶತಕ ಸಿಡಿಸಿ 2ನೇ ಸ್ಥಾನದಲ್ಲಿದ್ದಾರೆ. ಇದೀಗ ಗಿಲ್ 5 ಶತಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.
ಪಂದ್ಯದ ವಿಷಯಕ್ಕೆ ಬಂದರೆ ಟೀಮ್ ಇಂಡಿಯಾ ಟಾಸ್ ಗೆದ್ದ ಬ್ಯಾಟಿಂಗ್ ಮೊದಲ ಇನ್ನಿಂಗ್ಸ್ನಲ್ಲಿ 518-5ಕ್ಕೆ ಡಿಕ್ಲೇರ್ ಘೋಷಿಸಿದೆ. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ 175, ನಾಯಕ ಗಿಲ್ 129, ಸಾಯಿ ಸುದರ್ಶನ್ 87, ರಾಹುಲ್ 38, ನಿತೀಶ್ ಕುಮಾರ್ ರೆಡ್ಡಿ 43, ಧ್ರುವ್ ಜುರೆಲ್ 44 ರನ್ಗಳಿಸಿದ್ದರು.