Last Updated:
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿಶಾಲ್, “ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ. ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ. ತುಂಬಾ ಖುಷಿ ನೀಡಿದೆ” ಎಂದಿದ್ದಾರೆ.
ದಕ್ಷಿಣ ಕನ್ನಡ: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Tamil Actor Vishal) ತುಳುನಾಡಿನ ನೇಮೋತ್ಸವದಲ್ಲಿ(Tulunadu Nemotsava) ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ನೋಡಿದ್ದಾರೆ. ಇತ್ತೀಚೆಗೆ ವಿಶಾಲ್ ಅವರ ಆರೋಗ್ಯದಲ್ಲಿ(Health Upset) ಏರುಪೇರಾಗಿತ್ತು. ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿ, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದರು. ಇದಕ್ಕೆ ನಟ ವಿಶಾಲ್ ಒಪ್ಪಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿಶಾಲ್, “ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ. ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ. ತುಂಬಾ ಖುಷಿ ನೀಡಿದೆ, ನಿನ್ನೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ” ಎಂದರು. ಇದೇ ವೇಳೆ ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, “ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕತೆ ನಡೆಯುತ್ತಿದೆ” ಎಂದರು.
ಇದನ್ನೂ ಓದಿ: Chikkamagaluru Power Cut: ನಾಳೆ ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!
ಹರಿಪಾದೆ ಜಾರಂದಾಯ ಅತ್ಯಂತ ಕಾರಣಿಕದ ದೈವವಾಗಿದ್ದು, ನಂಬಿದವರಿಗೆ ಇಂಬು ನೀಡುವ ದೈವವಾಗಿದೆ. ಇಲ್ಲಿನ ನೇಮೋತ್ಸವ ಸಂದರ್ಭ ಜಾರಂದಾಯನ ಪಲ್ಲಕ್ಕಿಗೆ ಆವೇಶ ಬರುತ್ತದೆ. ಸುಮಾರು 15 ಜನ ಸೇವಕರು ನಿಯಂತ್ರಣಕ್ಕೆ ಪ್ರಯತ್ನಿಸಿದರೂ ನಿಯಂತ್ರಣಕ್ಕೆ ಸಿಗುವುದಿಲ್ಲ. ಇಂತಹ ಕಾರಣಿಕ ಹೊಂದಿರುವ ಶ್ರೀ ಕ್ಷೇತ್ರದ ಬಗ್ಗೆ ತಿಳಿದು ವಿಶಾಲ್ ಭೇಟಿ ನೀಡಿದ್ದಾರೆ.
ಅಲ್ಲದೇ ಈ ದೈವಸ್ಥಾನದಲ್ಲಿ ತುಲಾಭಾರ ಸೇವೆ ಪ್ರಾಮುಖ್ಯತೆ ಪಡೆದಿದೆ. ಭಕ್ತರು ಸಮಸ್ಯೆ ನಿವಾರಣೆಗೆ ತುಲಾಭಾರ ಸೇವೆ ನೀಡುತ್ತಾರೆ. ನಟ ವಿಶಾಲ್ ಕೂಡ ಆರೋಗ್ಯ ಸುಧಾರಿಸಿದ ನಂತರ ತುಲಾಭಾರ ಸೇವೆ ನೀಡುವುದಾಗಿ ಹರಕೆ ಹೊತ್ತಿದ್ದಾರೆ.
Dakshina Kannada,Karnataka
February 12, 2025 5:26 PM IST