Last Updated:
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಘಟನೆಯಾಗಿ 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ. ಆರ್ಸಿಬಿ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ವಿರಾಟ್ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು (ಸೆ.03): ಅದು 18 ವರ್ಷದ ಕನಸು ನನಸಾದ ಕ್ಷಣ. ಇಡೀ ಆರ್ಸಿಬಿ ತಂಡ (RCB Team) ಹಾಗೂ ಅಭಿಮಾನಿಗಳಿಗೆ ಸಂತಸದ ಸುದಿನ. ಎಲ್ಲೆಡೆ ಸಂಭ್ರಮ ಮುಗಿಲು ಮುಟ್ಟಿತ್ತು ಆದ್ರೆ ಈ ಖುಷಿ 48 ಗಂಟೆಯೂ ಇರಲಿಲ್ಲ. ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಮುಂದೆ ಕಾಲ್ತುಳಿತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ರು. ಇದು ಆರ್ಸಿಬಿ ದೊಡ್ಡ ಕಪ್ಪು ಚುಕ್ಕೆ ಆಗಿದೆ. ಈ ಕರಾಳ ಘಟನೆ ಸಂಭವಿಸಿ 3 ತಿಂಗಳಾದ ಬಳಿಕ ಮೊದಲ ಬಾರಿಗೆ ವಿರಾಟ್ ಕೊಹ್ಲಿ (Virat Kohli) ಭಾವುಕ ಪೋಸ್ಟ್ ಮಾಡಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಘಟನೆಯಾಗಿ 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ. ಆರ್ಸಿಬಿ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ವಿರಾಟ್ ಪೋಸ್ಟ್ ಮಾಡಿದ್ದಾರೆ.
“ಜೂನ್ 4 ರಂತಹ ಹೃದಯಾಘಾತಕ್ಕೆ ಜೀವನದಲ್ಲಿ ಯಾವುದೂ ನಿಮ್ಮನ್ನು ನಿಜವಾಗಿಯೂ ಸಿದ್ಧಪಡಿಸುವುದಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅದು ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು – ಆದ್ರೆ ದುರಂತವಾಗಿ ಮಾರ್ಪಟ್ಟಿದೆ.”
“ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ.
“Nothing in life really prepares you for a heartbreak like June 4th. What should’ve been the happiest moment in our franchise’s history… turned into something tragic. I’ve been thinking of and praying for the families of those we lost… and for our fans who were injured. Your… pic.twitter.com/nsJrKDdKWB
— Royal Challengers Bengaluru (@RCBTweets) September 3, 2025
“ಒಟ್ಟಾಗಿ, ನಾವು ಎಚ್ಚರಿಕೆಯಿಂದ, ಗೌರವದಿಂದ ಮತ್ತು ಜವಾಬ್ದಾರಿಯಿಂದ ಮುಂದುವರಿಯುತ್ತೇವೆ” ಎಂದು ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೆಬ್ಸೈಟ್ ಮೂಲಕ ಹೇಳಿದರು.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂನ್4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ರೆ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಕೇಸ್ ಸಂಬಂಧ ಆರ್ಸಿಬಿ, ಕೆಎಸ್ಸಿಎ ಮತ್ತು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಎಂಟರ್ಟೈನ್ಮೆಂಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅಲ್ಲದೆ ರಾಜ್ಯ ಸರ್ಕಾರವೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.
September 03, 2025 10:59 AM IST