Womens World Cup 2025: ಸೆಮಿಫೈನಲ್​ನಲ್ಲಿ ಇಂಗ್ಲೆಂಡ್​ ಬಗ್ಗುಬಡಿದ ದಕ್ಷಿಣ ಆಫ್ರಿಕಾ ವನಿತೆಯರು; ಸತತ 3ನೇ ಐಸಿಸಿ ಟೂರ್ನಿಯಲ್ಲಿ ತಲುಪಿದ ಹರಿಣ ಪಡೆ / South Africa reaches final of the ICC Womens ODI World Cup 2025 after defeating England in semi-final match | ಕ್ರೀಡೆ

Womens World Cup 2025: ಸೆಮಿಫೈನಲ್​ನಲ್ಲಿ ಇಂಗ್ಲೆಂಡ್​ ಬಗ್ಗುಬಡಿದ ದಕ್ಷಿಣ ಆಫ್ರಿಕಾ ವನಿತೆಯರು; ಸತತ 3ನೇ ಐಸಿಸಿ ಟೂರ್ನಿಯಲ್ಲಿ ತಲುಪಿದ ಹರಿಣ ಪಡೆ / South Africa reaches final of the ICC Womens ODI World Cup 2025 after defeating England in semi-final match | ಕ್ರೀಡೆ

Last Updated:

ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಮೊದಲ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ದಕ್ಷಿಣ ಆಫ್ರಿಕಾ ಸೋಲಿಸಿದೆ.

South Africa vs England
South Africa vs England

ಐಸಿಸಿ(ICC) ಏಕದಿನ ಮಹಿಳಾ ವಿಶ್ವಕಪ್(World Cup) 2025 ರ ಮೊದಲ ಫೈನಲಿಸ್ಟ್ ಅನ್ನು ನಿರ್ಧರಿಸಲಾಗಿದೆ. ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ(South Africa vs England) ನಡುವಿನ ಸೆಮಿಫೈನಲ್(Semi-final) ಪಂದ್ಯ ರೋಮಾಂಚಕವಾಗಿತ್ತು. ಈ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ದಕ್ಷಿಣ ಆಫ್ರಿಕಾ ಬಗ್ಗುಬಡಿದ್ದು, ಸತತ ಮೂರನೇ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಫೈನಲ್(Final) ತಲುಪಿದ ಸಾಧನೆ ಮಾಡಿದೆ.

ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ವನಿತೆಯರ ತಂಡ 125 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ಮಹಿಳಾ ವಿಶ್ವಕಪ್ 2025 ರ ಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡವಾಗಿದೆ.

ಬುಧವಾರ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನಾಯಕಿ ಲಾರಾ ವೋಲ್ವಾರ್ಡ್ ಅವರ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 319 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡವು 42.3 ಓವರ್‌ಗಳಲ್ಲಿ ಕೇವಲ 194 ರನ್‌ಗಳಿಗೆ ಆಲೌಟ್ ಆಯಿತು.

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

Womens World Cup 2025: ಸೆಮಿಫೈನಲ್​ನಲ್ಲಿ ಇಂಗ್ಲೆಂಡ್​ ಬಗ್ಗುಬಡಿದ ದಕ್ಷಿಣ ಆಫ್ರಿಕಾ ವನಿತೆಯರು; ಸತತ 3ನೇ ಐಸಿಸಿ ಟೂರ್ನಿಯಲ್ಲಿ ಫೈನಲ್ ತಲುಪಿದ ಹರಿಣ ಪಡೆ