World Cup 2027: ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ 2027 ರ ವಿಶ್ವಕಪ್ ಆಡ್ತಾರಾ? / Will Team India players Rohit Sharma and Virat Kohli play in the 2027 World Cup? | ಕ್ರೀಡೆ

World Cup 2027: ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ 2027 ರ ವಿಶ್ವಕಪ್ ಆಡ್ತಾರಾ? / Will Team India players Rohit Sharma and Virat Kohli play in the 2027 World Cup? | ಕ್ರೀಡೆ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2027 ರ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಅಜಿತ್ ಅಗರ್ಕರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಅಜಿತ್ ಅಗರ್ಕರ್ ಅವರ ಹೇಳಿಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಶಾಕ್ ನೀಡಿದೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027 ರ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಯಾವುದೇ ಬದ್ಧತೆಯಿಲ್ಲ ಎಂದು ಅಗರ್ಕರ್ ಸ್ಪಷ್ಟವಾಗಿ ಹೇಳಿದ್ದಾರೆ. ಅಗರ್ಕರ್ ಅವರ ಹೇಳಿಕೆಯ ನಂತರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2027 ರ ವಿಶ್ವಕಪ್‌ನಲ್ಲಿ ಆಡುವುದನ್ನು ನೋಡಲ ಸಾಧ್ಯವಿಲ್ಲ ಎಂಬ ಊಹಾಪೋಹಗಳು ಪ್ರಾರಂಭವಾಗಿವೆ. ಇದು ಲಕ್ಷಾಂತರ ಟೀಮ್ ಇಂಡಿಯಾ ಕ್ರಿಕೆಟ್ ಅಭಿಮಾನಿಗಳು ಚಿಂತಿಸುವಂತೆ ಮಾಡಿದೆ.

ಅಜಿತ್ ಅಗರ್ಕರ್ ಹೇಳಿಕೆ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಬಿಡುವಿದ್ದಾಗಲೆಲ್ಲಾ ದೇಶೀಯ ಕ್ರಿಕೆಟ್ ಆಡಲು ಈಗಾಗಲೇ ತಿಳಿಸಲಾಗಿತ್ತು ಎಂದು ಅಜಿತ್ ಅಗರ್ಕರ್ ಹೇಳಿದ್ದಾರೆ. ರೋಹಿತ್ ಮತ್ತು ವಿರಾಟ್ ಹಲವು ವರ್ಷಗಳಿಂದ ಟೀಮ್ ಇಂಡಿಯಾವನ್ನು ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರು ರನ್ ಗಳಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಡ್ರೆಸ್ಸಿಂಗ್ ರೂಮ್​ನಲ್ಲಿ ಅವರು ಇನ್ನೂ ನಾಯಕರಾಗಿದ್ದಾರೆ. ಅವರು ಏಕದಿನ ಮಾದರಿಯಲ್ಲಿ ಬಹಳ ಯಶಸ್ವಿಯಾಗಿದ್ದಾರೆ. ನೀವು ಹೆಚ್ಚು ಯೋಚಿಸುವ ಅಗತ್ಯವಿಲ್ಲ ಎಂದು ಅಜಿತ್ ಅಗರ್ಕರ್ ಹೇಳಿದ್ದಾರೆ.

ಬಿಸಿಸಿಐ ಆದೇಶ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗಳಿಗೆ ಬಿಸಿಸಿಐ ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ಶುಭಮನ್ ಗಿಲ್ ಅವರನ್ನು ಏಕದಿನ ತಂಡದ ನಾಯಕನ್ನಾಗಿ ಮಾಡಲಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಆಟಗಾರರಾಗಿ ಏಕದಿನ ತಂಡದಲ್ಲಿ ಸೇರಿಸಲಾಗಿದೆ. ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡವು ಅಕ್ಟೋಬರ್ 19-25ರ ನಡುವೆ ಮೂರು ಏಕದಿನ ಪಂದ್ಯಗಳನ್ನು ಆಡಲಿದ್ದು, ಅಕ್ಟೋಬರ್ 29 ರಿಂದ ಅಕ್ಟೋಬರ್ 8 ರವರೆಗೆ ಉಭಯ ದೇಶಗಳು ಐದು ಟಿ20 ಪಂದ್ಯಗಳನ್ನು ಆಡಲಿವೆ. ಶ್ರೇಯಸ್ ಅಯ್ಯರ್ ಅವರನ್ನು ಏಕದಿನ ಉಪನಾಯಕರನ್ನಾಗಿ ನೇಮಿಸಲಾಗಿದೆ.

ಭಾರತ ಏಕದಿನ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಭಾರತ ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ವಿಸಿ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೀ), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಸಂಜು ಸಾಮ್ಸನ್, ವಾಷಿಂಗ್ಟನ್ ಸುಂದರ್.